ಹುಬ್ಬಳ್ಳಿ: ಬಿಟ್ ಕಾಯಿನ್ ಬಗ್ಗೆ ಕಾಂಗ್ರೆಸ್ ಬಹಳ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಆಧಾರ ರಹಿತ ಸುಳ್ಳಿನ ಪ್ರಚಾರ ಮಾಡುತ್ತಿದೆ. ಅಲ್ಲದೇ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಆಧಾರ ರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹ್ಯಾಕರ್ ಶ್ರೀಕಿಯು ಹ್ಯಾರಿಸ್ ಪುತ್ರ, ರುದ್ರಪ್ಪ ಲಮಾಣಿ ಪುತ್ರನ ಹೆಸರು ಹೇಳಿದ್ದಾನೆ. ಕಾಂಗ್ರೆಸ್ ನವರು ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ಕೊಳ್ಳುತ್ತಿದ್ದಾರೆ. ಬಿಟ್ ಕಾಯಿನ್ ದಂಧೆ ಬಗ್ಗೆ ಸರ್ಕಾರಿಂದ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದರು.ಇದೇ ರೀತಿ ಬೇಜವಬ್ದಾರಿ ಹೇಳಿಕೆಗಳನ್ನು ಕಾಂಗ್ರೆಸ್ ನವರು ನೀಡಿದರೇ ಮುಂದಿನ ದಿನಗಳಲ್ಲಿ ಪೊಲೀಸ್ ದೂರು ನೀಡಬೇಕಾಗುತ್ತದೆ. ಕಾಂಗ್ರೆಸ್ ದಲಿತರ ಬಗ್ಗೆ ಯಾವ ರೀತಿ ನಡೆಸಿಕೊಂಡಿದೆ ಎನ್ನುವುದು ಗೊತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

