ಬೆಂಗಳೂರು :ಪ್ರಧಾನಿ ಹೇಳಿದ್ದಾರೆ ಎಂಬ ಕಾರಣಕ್ಕೆ ಬಿಟ್ ಕಾಯಿನ್ ಪ್ರಕರಣವನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಬಹುದು. ಆದರೆ ಕಾಂಗ್ರೆಸ್ ಈ ವಿಷಯ ತಾರ್ಕಿಕ ಅಂತ್ಯಕಾಣುವವರೆಗೂ ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ನಿನ್ನೆ ಮುಖ್ಯಮಂತ್ರಿಯವರು ಪ್ರಧಾನಿಯವರನ್ನು ಭೇಟಿ ಮಾಡಿದ ಬಳಿಕ ಬಿಟ್ ಕಾಯಿನ್ ವಿಚಾರವನ್ನು ಬಿಟ್ಟು ಹಾಕುವಂತೆ ಪ್ರಧಾನಿ ಸಲಹೆ ಮಾಡಿದ್ದಾರೆ. ಹಾಗಾಗಿ ಅವರು ಅದನ್ನು ಕೈಬಿಡಬಹುದು. ಇದು ಜನರ ವಿಷಯ. ಜನಪರವಾದ ವಿಷಯಗಳನ್ನು ನಾವು ಅಷ್ಟು ಸುಲಭವಾಗಿ ಕೈಬಿಡುವುದಿಲ್ಲ ಎಂದರು.
ಬಿಟ್ ಕಾಯಿನ್‍ಗೆ ಸಂಬಂಧಪಟ್ಟಂತೆ ನಾವು ಕೂಡ ಮಾಹಿತಿ ಕಲೆ ಹಾಕುತ್ತಿದ್ದೇವೆ. ಸರ್ಕಾರದ ಸಚಿವರು ಮತ್ತು ಅಧಿಕಾರಿಗಳೇ ನಮಗೆ ಮಾಹಿತಿ ಕೊಡುತ್ತಿದ್ದಾರೆ. ತನಿಖೆಯ ಅಂಶಗಳನ್ನು ಸರ್ಕಾರ ಬಹಿರಂಗಪಡಿಸಬೇಕು. ಜಾರಿ ನಿರ್ದೇಶನಾಲಯಕ್ಕೆ ಮತ್ತು ಪ್ರಧಾನಿಯವರಿಗೆ ಇಲ್ಲಿನ ಪ್ರಮುಖರು ಬರೆದಿರುವ ಪತ್ರವನ್ನು ಬಹಿರಂಗಪಡಿಸಬೇಕು. ತನಿಖೆಯಲ್ಲಿ ಕಂಡುಕೊಂಡಿರುವ ಸತ್ಯವೇನು ಎಂಬುದನ್ನು ಜನರ ಮುಂದಿಡಬೇಕು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

