Breaking News

ಹಳೆ ವೈಷಮ್ಯದಿಂದ ಹರಿಯಿತು ನೆತ್ತರು-ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ಹಾಡಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ‌‌ ಮಾಡಿರುವ ಘಟನೆ ಹೆಣ್ಣೂರು ಪೊಲೀಸ್ (Hennur Police station) ಠಾಣಾ ವ್ಯಾಪ್ತಿಯ ನಾಗವಾರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ (Bangalore Rural District) ಮೂಲದ ಶ್ರೀಧರ್ ಮೃತಪಟ್ಟ ವ್ಯಕ್ತಿ ಎಂದು‌ ಗುರುತಿಸಲಾಗಿದೆ.

ಇಂದು ಬೆಳಗ್ಗೆ ನಾಗವಾರದಲ್ಲಿ ಹೋಗುವಾಗ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ಕೈದು ಮಂದಿ‌ ದುಷ್ಕರ್ಮಿಗಳ ಗುಂಪು ಏಕಾಏಕಿ ಶ್ರೀಧರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕುತ್ತಿಗೆ ಹಾಗೂ ತಲೆಭಾಗಕ್ಕೆ ಮಾರಾಕಾಸ್ತ್ರದಿಂದ (Murder in Bangalore) ಕೊಚ್ಚಿದ್ದಾರೆ. ತೀವ್ರ ರಕ್ತಸ್ರಾವಗೊಂಡು ಸ್ಥಳದಲ್ಲೇ ಶ್ರೀಧರ್ ಮೃತಪಟ್ಟಿದ್ದಾರೆ.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *