Breaking News

ನಮ್ದು ಕುಟುಂಬ ರಾಜಕಾರಣವಾದರೇ ನಿಮ್ದು ಒಡಕು ರಾಜಕೀಯನಿತ್ಯ ಕಾಯಕ -ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ, ಬೀದಿಯಲ್ಲಿ ಇನ್ನೊಂದು ಮುಖ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಕಿಡಿ ಕಾರಿದ್ದಾರೆ. ಇದೇ ವೇಳೆ, ಒಡಕು ರಾಜಕಾರಣ ಬಿಜೆಪಿಯ ನಿತ್ಯ ಕಾಯಕವಾದರೆ, ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ ಎಂದು ಕಟುವಾಗಿ ಟೀಕಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ

ಜೆಡಿಎಸ್​​​ನಲ್ಲಿನ ಕುಟುಂಬ ರಾಜಕಾರಣದ ಬಗ್ಗೆ ರಾಜ್ಯ ಬಿಜೆಪಿ ಮಾಡಿರುವ ಟ್ವೀಟ್​​​ಗೆ ಪ್ರತಿಟ್ವೀಟ್ ಮಾಡಿರುವ ಅವರು, ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ‘ಆಪರೇಷನ್ ಕಮಲ’ದ ಮೂಲಕ ರಚನೆ ಮಾಡಿದ ಸರ್ಕಾರಗಳೇ ಸಾಕ್ಷಿ.

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ ಸರಿ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ ಎಂದು ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ಬಗ್ಗೆ ಕುಮಾರಸ್ವಾಮಿ ಬೊಟ್ಟು ಮಾಡಿದ್ದಾರೆ.

Share News

About admin

Check Also

ಸಚಿವ ಸಂತೋಷ್ ಲಾಡ್ ಅವರಿಗೆ ಅದ್ದೂರಿ ಗೌರವ ಸನ್ಮಾನ; ಆತ್ಮೀಯ ಭೇಟಿಯಲ್ಲಿ…

ಸಚಿವ ಸಂತೋಷ್ ಲಾಡ್ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ… ಕಾಂಗ್ರೆಸ್ ಮುಖಂಡರಾದ ಫತೇಶಾ ಯಾರಗಟ್ಟಿ ಹಾಗೂ ದಾದಾಪೀರ್ ಬಳ್ಳಾರಿ ಅಬ್ಬಾಸ್ …

Leave a Reply

Your email address will not be published. Required fields are marked *