
ಬೆಂಗಳೂರು : ಬಿಟ್ ಕಾಯಿನ್ ಪ್ರಕರಣದ (Karnataka Bitcoin Scam) ಬೆನ್ನಲ್ಲೇ ರಾಜ್ಯ ನಾಯಕತ್ವದಲ್ಲಿ ಬದಲಾವಣೆಯ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆ ಅಲರ್ಟ್ ಆದ ಸಿಎಂ ಬೊಮ್ಮಾಯಿ (Cm Basavaraj Bommai) ಅವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮೊರೆ ಹೋಗಿದ್ದಾರೆ. ಸಿಎಂ ಬೆನ್ನಿಗೆ ನಿಲ್ಲಲು ಬಿಎಸ್ವೈ ಸಮ್ಮತಿ ನೀಡಿದ್ದು, ಅಗತ್ಯ ಬಿದ್ದರೆ ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸುತ್ತೇನೆ ಎನ್ನುವ ಅಭಯ ನೀಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.
ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ (Bitcoin Case) ಭಾರಿ ಸದ್ದು ಮಾಡುತ್ತಿದೆ. ಮುಖ್ಯಮಂತ್ರಿಗಳ ಪಾತ್ರದ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ಸರಣಿ ಆರೋಪ ಮಾಡುತ್ತಿದೆ. ಪ್ರಕರಣದ ಗಂಭೀರತೆ ಹೆಚ್ಚಾಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಲರ್ಟ್ ಆಗಿದ್ದಾರೆ. ಪ್ರಕರಣದ ಬಗ್ಗೆ ವಿಸ್ತೃತ ಮಾಹಿತಿಯನ್ನು ಹೈಕಮಾಂಡ್ಗೆ ಸಲ್ಲಿಸಿದ್ದಾರೆ. ಖುದ್ದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ ವಿವರಣೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

