Breaking News

ದತ್ತಮಾಲಾ ಅಭಿಯಾನ ಕೊನೆ ದಿನ..ಜಿಲ್ಲೆಯಾದ್ಯಂತ ಬಿಗಿ ಪೊಲೀಸ್​ ಬಂದೋಬಸ್ತ್​​..

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಶ್ರೀರಾಮಸೇನೆ ಸಂಘಟನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಬಿಗಿ ಬಂದೋಬಸ್ತ್ ಹಾಗೂ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.

ಸಾಂದರ್ಭಿಕ ಚಿತ್ರ

ಇಂದು ಅಭಿಯಾನದ ಕೊನೆಯ ದಿನವಾಗಿದೆ. ದತ್ತ ಮಾಲಾ ಅಭಿಯಾನ ಅಂಗವಾಗಿ ಸೂಕ್ಷ್ಮ ಗಡಿ ಪ್ರದೇಶವಾದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೇ ಬಿಗಿ ಕಟ್ಟೆಚ್ಚರ ವಹಿಸಿದ್ದಾರೆ.ಶ್ರೀರಾಮಸೇನೆ ವತಿಯಿಂದ ದತ್ತಪೀಠದದಲ್ಲಿ ನಡೆಯುತ್ತಿರುವ ದತ್ತ ಮಾಲಾ ಅಭಿಯಾನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಮಾಲಾಧಾರಿಗಳು ಜಿಲ್ಲೆಗೆ ಆಗಮಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಬರುವ ಎಲ್ಲಾ ವಾಹನಗಳಿಗೆ ತಪಾಸಣೆ ಮಾಡಿ ಬಿಡಲಾಗುತ್ತಿದೆ. ಜಿಲ್ಲೆಯಾದ್ಯಂತ ಪ್ರತಿ ಚೆಕ್​​ಪೋಸ್ಟ್ ಹಾಗೂ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿಯನ್ನು ಅಳವಡಿಸಿ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *