Breaking News

ಬಿಜೆಪಿ ಹು-ಧಾ ಪಶ್ಚಿಮ್‌ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆ

ಧಾರವಾಡ :ಭಾರತೀಯ ಜನತಾ ಪಾರ್ಟಿಯ ಹು-ಧಾ ಪಶ್ಷಿಮ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆಯು ನಗರದ ಖಾಸಗಿ ಹೊಟೆಲ್‌ನಲ್ಲಿ ಗುರುವಾರ ಜರುಗಿತು.ಸಭೆಯಲ್ಲಿ ಮುಖ್ಯ ಅಥಿಯಾಗಿ ಪಾಲ್ಗೊಂಡು ಮಾತನಾಡಿದ ಹು-ಧಾ ಮಹಾನಗರ ಜಿಲ್ಲಾ ಅಧ್ಯಕ್ಷರು ಆದ ಶಾಸಕ ಅರವಿಂದ ಬೆಲ್ಲದ,
ಪಕ್ಷದ ಎಲ್ಲ ಮೋರ್ಚಾಗಳ ಪದಾಧಿಕಾರಿಗಳು ವಾರ್ಡ್ ಮಟ್ಟದಲ್ಲಿ ಸಭೆ ನಡೆಸಬೇಕು. ಪ್ರಮುಖವಾಗಿ ಯುವ ಮೋರ್ಚಾ, ಮಹಿಳಾ ಮೋರ್ಚಾ, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮೋರ್ಚಾ, ಹಿಂದುಳಿದ ವರ್ಗ ಮೋರ್ಚಾಗಳ ಪದಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಸಾರ್ವಜನಿಕರನ್ನು ಸತತ ಸಂಪರ್ಕ ಸಾಧಿಸಬೇಕು.ಇದರಿಂದ ವಾರ್ಡ್‌ಗಳಲ್ಲಿನ ಸಮಸ್ಯೆಗಳ ಮಾಹಿತಿ ಸಿಗುತ್ತದೆ. ಜೊತೆಗೆ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಬೇಕು. ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಕೊಂಡ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.


ಪ್ರಸ್ತುತ ತಾವು ಪ್ರತಿನಿಧಿಸುತ್ತಿರುವ ಪಶ್ಚಿಮ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಅಂದಾಜು ೧೬೦ ರಿಂದ ೨೦೦ ಕೋ.ರೂ.ಗಳ ವೆಚ್ಚದ ರಸ್ತೆಗಳ ಕಾಮಗರಿಗಳಿಗೆ ಚಾಲನೆ ಸಿಕ್ಕಿದೆ. ಈ ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಕಿವಿಮಾತು ಹೇಳಿದರು.
ಸಭೆಯ ಅಧ್ಯಕ್ಷತೆವಹಿಸಿದ್ದ ಹು-ಧಾ ಪಶ್ಷಿಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಬಸವರಾಜ ಗರಗ ಮಾತನಾಡಿ, ಪಕ್ಷದ ಸಂಘಟನೆಯ ದಿಸೆಯಲ್ಲಿ ಪ್ರತಿಯೊಂದು ಮೋರ್ಚಗಳ ಪದಾಧಿಕಾರಿಗಳು ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಸಂಸದರ,ಶಾಸಕರ ಅನುದಾನ, ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳನ್ನು ಜನರ ಬಳಿಗೆ ಒಯ್ಯುವ ಕೆಲಸ ಮಾಡಬೇಕು. ಜೊತೆಗೆ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮತದಾರರ ನೋಂದಣಿ ಇನ್ನಿತರ ಕಾರ್ಯಗಳನ್ನು ನಿರಂತರವಾಗಿ ಕೈಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಾನಂದ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ ಜಾಧವ, ಅಮಿತ ಪಾಟೀಲ ಇದ್ದರು. ಮಹಾನಗರ ಪಾಲಿಕೆ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು

Share News

About admin

Check Also

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಅರೆಸ್ಟ್, ₹3.45 ಲಕ್ಷದ ಚಿನ್ನಾಭರಣ ವಶ…

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಆರೋಪಿಗಳ ಬಂಧನ, ₹3.45 ಲಕ್ಷ ಮೌಲ್ಯದ ಚಿನ್ನಾಭರಣ ವಶ! ಹುಬ್ಬಳ್ಳಿ: ಮನೆಗೆ ಬೀಗ …

Leave a Reply

Your email address will not be published. Required fields are marked *