Breaking News

ಉತ್ತರ ಕರ್ನಾಟಕದಲ್ಲಿ ಇನ್ನೂ ಎರಡು ದಿನ ಜೋರು ಮಳೆ ಮುನ್ಸೂಚನೆ

ಧಾರವಾಡ: ಉತ್ತರ ಕರ್ನಾಟಕದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ ಆಗಲಿದೆ ಎಂದು ಧಾರವಾಡ ಕೃಷಿ ವಿವಿ ಹವಾಮಾನ ಕೇಂದ್ರದ ಮುಖ್ಯಸ್ಥ ಡಾ.ಆರ್.ಹೆಚ್. ಪಾಟೀಲ್​ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಮುಂದಿನ 48 ಗಂಟೆಗಳ ಅವಧಿಯಲ್ಲಿ ಜೋರು ಮಳೆಯಾಗಲಿದೆ. ವಾಯುಭಾರ ಕುಸಿತದ ಪರಿಣಾಮ ಮಳೆ ದಕ್ಷಿಣದಿಂದ ಈಗ ಉತ್ತರಕ್ಕೆ ಬಂದಿದೆ. ನಮ್ಮ ರಾಜ್ಯದ ದಕ್ಷಿಣ ಭಾಗದಂತೆ ಈಗ ಉತ್ತರ ಭಾಗದಲ್ಲಿಯೂ ಮಳೆಯಾಗಲಿದೆ ಎಂದರು.ನವೆಂಬರ್‌ 19 ಮತ್ತು 20ರಂದು ಸಾಕಷ್ಟು ಮಳೆಯಾಗಲಿದೆ. ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಎರಡೂ ಕಡೆ ಮಳೆ ಆಗುತ್ತದೆ. ಇದರಿಂದ ಮುಂಗಾರು ಮತ್ತು ಹಿಂಗಾರು ಎರಡು ಬೆಳೆಗೆ ಹಾನಿಯಾಗಲಿದೆ. ಹಿಂಗಾರು ಬೆಳೆಯಲ್ಲಿ‌ ನೀರು ನಿಲ್ಲದಂತೆ ಮಾಡಬೇಕು. ಗದ್ದೆಗಳಲ್ಲಿ ರೈತರು ಬಸಿಗಾಲುವೆ ಮಾಡಬೇಕು ಎಂದು ತಿಳಿಸಿದ್ದಾರೆ.ಮೋಡ ಕವಿದ ವಾತಾವರಣ ನವೆಂಬರ್‌ 24ರವರೆಗೂ ಇರುತ್ತೆ. ಇದನ್ನು ನೋಡಿಕೊಂಡು ಕೃಷಿ ಚಟುವಟಿಕೆ ಮಾಡಬೇಕು ಎಂದು ರೈತರಿಗೆ ಮಾಹಿತಿ ನೀಡಿದರು

Share News

About admin

Check Also

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಅರೆಸ್ಟ್, ₹3.45 ಲಕ್ಷದ ಚಿನ್ನಾಭರಣ ವಶ…

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಆರೋಪಿಗಳ ಬಂಧನ, ₹3.45 ಲಕ್ಷ ಮೌಲ್ಯದ ಚಿನ್ನಾಭರಣ ವಶ! ಹುಬ್ಬಳ್ಳಿ: ಮನೆಗೆ ಬೀಗ …

Leave a Reply

Your email address will not be published. Required fields are marked *