
ಬೆಂಗಳೂರು : ಕಳೆದು ಹಲವು ದಿನಗಳಿಂದಲೂ ಸುರಿಯುತ್ತಿರುವ ಅಕಾಲಿಕ ಮಳೆ ಬಹುತೇಕ ಜಿಲ್ಲೆಯ ಅನ್ನದಾತರನ್ನ ಕಂಗಾಲು ಮಾಡಿದೆ. ಜತೆಗೆ ನಿರಂತರ ಮಳೆಯಿಂದಾಗಿ ರಾಜ್ಯದಾಂದ್ಯಂತ ಹಲವು ಅವಾಂತರಗಳು ಕೂಡ ಸೃಷ್ಠಿಯಾಗುತ್ತಿವೆ. ಸದ್ಯ ರಾಜ್ಯದಲ್ಲಿ ವರುಣಾರ್ಭಟ ಮುಗಿಯುವ ಲಕ್ಷಣವೂ ಕಾಣುತ್ತಿಲ್ಲ. ಈ ಮಧ್ಯೆ ಹವಾಮಾನ ಇಲಾಖೆಯೂ ಕೂಡ ಮುನ್ನೆಚ್ಚರಿಕೆ ನೀಡಿದ್ದು, ನ.23ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಅಲ್ಲದೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಭೀತಿ ಇದ್ದು, ಈ ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಕೂಡ ಘೋಷಿಸಲಾಗಿದೆ. ಇತ್ತ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜತೆಗೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅಲ್ಲದೇ ಬೆಂಗಳೂರು ಮಹಾನಗರದಲ್ಲಿಯೂ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆ ಮುಂದಿನ 48 ಗಂಟೆ ಧಾರಾಕಾರ ಮಳೆಯಾಗಲಿದ್ದು, ಅಲ್ಲದೇ ನ.24ರವರೆಗೂ ಮೋಡಕವಿದ ವಾತಾವರಣ ಮುಂದುವರೆಯಲಿದೆ ಎಂದಿದೆ.
ರಣ ಭೀಕರ ಮಳೆಯಿಂದಾಗಿ ಕಂಗಾಲಾದ ರಾಜ್ಯದ ರೈತರು..!
ಹೌದು ನಿರಂತರವಾಗಿ ಸುರಿಯುತ್ತಿರುವ ರಣ ಮಳೆಯಿಂದಾಗಿ ಈಗಾಗಲೇ ರಾಜ್ಯದಲ್ಲಿ 7.31 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಅಂಧಾಜಿಸಲಾಗಿದೆ.
ಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆಗಳೆಲ್ಲವೂ ರಣ ಬೀಕರ ಮಳೆಯಿಂದಾಗಿ ಮಣ್ಣು ಪಾಲಾಗುತ್ತಿದೆ. ಕೃಷಿ ಇಲಾಖೆಯ ಅಂದಾಜಿನ ಪ್ರಕಾರ ನವೆಂಬರ್ 16ನೇ ತಾರೀಖಿನ ವರೆಗೂ ಸುಮಾರು 7.31 ಲಕ್ಷ ಹೆಕ್ಟೇರ್ ಗೂ ಅಧಿಕ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಗೊಳಗಾಗಲಿದೆ. ಈ ಮೂಲಕ ನಾಡಿನ ಅನ್ನಧಾತರು ಸಾವಿರಾರು ಕೋಟಿ ರೂ ನಷ್ಟವನ್ನ ಅನುಭವಿಸುವಂತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

