Breaking News

ಧಾರಾಕಾರ ಮಳೆಗೆ ಅಸ್ತವ್ಯಸ್ತವಾದ ಪೇಡಾನಗರಿ ಜನ

ಧಾರವಾಡ : ಜಿಲ್ಲೆಯಲ್ಲಿ ಇಂದು ಬೆಳಿಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅವಳಿ-ನಗರದ ಜನತೆ ಪರದಾಡುವಂತಾಗಿದೆ. ವಾಹನ ಸವಾರರಿಗೆ ಸಂಚಾರಕ್ಕೆ ಅಡೆತಡೆ ಉಂಟಾಯಿತು. ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ತೊಂದರೆ ಅನುಭವಿಸುವಂತಾಯಿತು. ಅಲ್ಲದೆ ಕೆಲ ಮನೆಗಳ ಮಾಳಿಗೆ ಹಾಗೂ ಗೋಡೆಗಳು ಸಹ ಕುಸಿದಿರುವುದು ಕಂಡು ಬಂತು. , ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೊಲಗಳಲ್ಲಿ ನೀರು ನಿಂತು ಬೆಳೆಗಳು ಹಾನಿಯಾಗುವ ಪರಿಸ್ಥಿತಿ ಎದುರಾಗಿದೆ. ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗುವಂತಾಗಿದೆ

Share News

About admin

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *