Welcome to bigtvnews   Click to listen highlighted text! Welcome to bigtvnews
Breaking News

ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್​ ಪಡೆಯುವ ಸರ್ಕಾರವಿದೆ-ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್​ ಪಡೆಯುವ ಸರ್ಕಾರವಿದೆ. ರಾಜ್ಯಪಾಲರು ಇಂತಹ ಸರ್ಕಾರವನ್ನು ವಜಾ ಮಾಡುವಂತೆ ಪತ್ರ ಬರೆಯುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು ಕಾಮಗಾರಿ ತೆಗೆದುಕೊಳ್ಳಬೇಕಾದರೆ ಮಂತ್ರಿಗಳಿಗೆ, ಎಂಎಲ್​ಎಗಳಿಗೆ 40 ಪರ್ಸೆಂಟ್ ಕಮಿಷನ್​ ಕೊಡಬೇಕಾಗಿದೆ ಎಂದು ಗುತ್ತಿಗೆದಾರರ ಸಂಘ ಪ್ರಧಾನಿ ಅವರಿಗೆ ಪತ್ರ ಬರೆದಿದೆ ಎಂದರು.

ಇಷ್ಟೊಂದು ಕಮಿಷನ್​ ತೆಗೆದುಕೊಳ್ಳುವ ಸರ್ಕಾರವನ್ನು ನನ್ನ ಜೀವಮಾನದಲ್ಲಿ ನೋಡಿಲ್ಲ. ಅವರುಗಳು ಗ್ರಾಮೀಣಾಭಿವೃದ್ಧಿ, ಮೈನರ್ ಇರಿಗೇಷನ್, ಮೇಜರ್ ಇರಿಗೇಷನ್, ಮೀಡಿಯಂ ಇರಿಗೇಷನ್, ಲೋಕೋಪಯೋಗಿ, ನಗರಾಭಿವೃದ್ಧಿ ಸೇರಿದಂತೆ ಎಲ್ಲಾ ಇಲಾಖೆಯಲ್ಲೂ ಲಂಚ, ಕಮಿಷನ್​ ಎಂದು ಬಾಯಿ ಬಿಟ್ಟು ನಿಂತಿದ್ದಾರೆ.

ನಮಗೆ ಕೆಲಸ ಮಾಡಲು ಆಗುತ್ತಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ‌ಕಮಿಷನ್​ ನಡೆಯುತ್ತದೆ ಎಂಬ ವಿವರವುಳ್ಳ ಪತ್ರವನ್ನು ಕಂಟ್ರ್ಯಾಕ್ಟರ್ ಅಸೋಸಿಯೇಷನ್ ಅವರು ಪ್ರಧಾನಿಗೆ ಬರೆದಿದ್ದಾರೆ. ಹೀಗಿರುವಾಗ, ಈ ಸರ್ಕಾರ ನೈತಿಕವಾಗಿ ಉಳಿಯಲು ಅಧಿಕಾರ ಇದೆಯೇ? ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಹೋಗಬೇಕು ಎಂದರು.

Spread the love

About admin

Check Also

ಅಹಿತಕರ ಘಟನೆಗಳನ್ನು ತಡೆಯುವ ದೃಷ್ಟಿಯಿಂದ ಹೊಸ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ-

ಹುಬ್ಬಳ್ಳಿ: ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಹಾಗೂ ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯಲು ಪೊಲೀಸ್ ಇಲಾಖೆಯಿಂದ ಖಾಸಗಿ …

Leave a Reply

Your email address will not be published. Required fields are marked *

You cannot copy content of this page
Click to listen highlighted text!