
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರದಲ್ಲಿ ಕಿಸೆಗಳ್ಳತನ ಮಾಡಿ ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಕಳ್ಳನನ್ನು ಹುಬ್ಬಳ್ಳಿ ನಗರ ಠಾಣೆ ಪೊಲೀಸರು 21 ವರ್ಷಗಳ ಬಳಿಕ ಪತ್ತೆ ಹಚ್ಚಿ ಬಂಧಿಸಿರುವ ಘಟನೆ ನಡೆದಿದೆ.
ಹುಬ್ಬಳ್ಳಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2000 ರಲ್ಲಿ ಹುಬ್ಬಳ್ಳಿಯ ಗಣೇಶಪೇಟೆ ಅಬ್ದುಲ್ ವಾಚಮೇಕರ್ ಎಂಬಾತನನ್ನು ಕಿಸೆಗಳ್ಳತನ ಪ್ರಕರಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನಂತರ ಅಬ್ದುಲ್ ಬೇಲ್‌ನಿಂದ ಹೊರಗಡೆ ಮರಳಿ ಕೋರ್ಟ್‌ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ. ಠಾಣೆಯ ಪಿಐ ಆನಂದ ಹುಬ್ಬಳ್ಳಿ ನಗರ ಪೊಲೀಸ್ ಎಂ.ಒನಕುದರಿ ನೇತೃತ್ವದಲ್ಲಿ ಪೋಲಿಸರ ತಂಡ ಆರೋಪಿತಯನ್ನು ಗೋವಾ ರಾಜ್ಯದಲ್ಲಿ ಪತ್ತೆ ಹಚ್ಚಿ ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪೊಲೀಸರ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

