Breaking News

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: ಮಳೆಯಿಂದ ಜಿಲ್ಲೆಯಲ್ಲಿ ಒಂದಿಲ್ಲೊಂದು ಅಪಘಾತ

ತುಮಕೂರು: ಜಿಲ್ಲೆಯಲ್ಲಿ ಮಳೆಯಿಂದ ಒಂದಿಲ್ಲೊಂದು ಅವಘಡಗಳು ಸಂಭವಿಸುತ್ತಲೇ ಇವೆ. ಅಕಾಲಿಕ ಮಳೆಯಿಂದ ಬೆಳೆಗಳು ನೆಲಕಚ್ಚಿವೆ. ಇನ್ನೊಂದೆಡೆ, ರಸ್ತೆ ಅಪಘಾತಗಳು ಕೂಡಾ ಸಂಭವಿಸುತ್ತಿವೆ.‌

ಗುಬ್ಬಿ ತಾಲೂಕಿನ ತೊರೆಹಳ್ಳದ ಕೆರೆಕೋಡಿ ಬಳಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಹಳ್ಳದಲ್ಲಿ ಮುಳುಗಿದ್ದ ಕಾರನ್ನು ಹೊರತೆಗೆಯಲು ತಕ್ಷಣಕ್ಕೆ ಸಾಧ್ಯವಾಗಿರಲಿಲ್ಲ. ನಂತರ ಸ್ಥಳೀಯರ ಸಹಕಾರದಿಂದ ಕ್ರೇನ್ ಬಳಸಿ ಕಾರನ್ನು ಹಳ್ಳದಿಂದ ಮೇಲೆತ್ತಲಾಗಿದೆ.

ಗುಬ್ಬಿಯಿಂದ ತೊರೆಹಳ್ಳದ ಕಡೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *