Breaking News

ರಾಜಧಾನಿಯಲ್ಲಿ ಇನ್ನು 2 ದಿನ ಮಳೆ-ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ (Bangalore Rains) ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು (ನ.22) ಬೆಳಗ್ಗೆ 26.5 ರಷ್ಟು ಗರಿಷ್ಟ ಉಷ್ಣಾಂಶವಿದ್ದು. 20.5 ಕನಿಷ್ಠ ಉಷ್ಣಾಂಶ ದಾಖಾಲಾಗಿದೆ. ನಗರದಲ್ಲಿ 5.2 ಮಿಲಿ ಮೀಟರ್ ಮಳೆಯಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.2 ಮಿಮೀ ಮಳೆಯಾಗಿದ್ದು, ಎಚ್ಎಎಲ್​ನಲ್ಲಿ 1.4 ಮಿಲಿ ಮೀಟರ್ ಮಳೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿ 6.5 ಮಿಲಿ ಮೀಟರ್ ಮಳೆಯಾಗಿದ್ದರೆ, ಜಿಕೆವಿಕೆಯಲ್ಲಿ 123 ಮಿಲಿ ಮೀಟರ್ ಮಳೆಯಾಗಿದೆ. ರಾಜಧಾನಿಯಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವಾರಣ ಇರಲಿದೆ ಅಂತ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.ನಿರಂತರ ಮಳೆಯಿಂದ ರಾಜ್ಯದಲ್ಲಿ ತೀರಾ ನಷ್ಟ ಉಂಟಾಗಿದೆ. ರೈತರು ಬೆಳೆದ ಬೆಳೆಗಳಿಂದ ಹಿಡಿದು ವಾಸವಿದ್ದ ಮನೆಗಳು ನಾಶವಾಗಿವೆ. ಬೆಂಗಳೂರಿನಲ್ಲೂ ಅಪಾರ ಪ್ರಮಾಣದ ನಷ್ಟವಾಗಿದೆ. ಅಪಾರ್ಟ್​ಮೆಂಟ್​ಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಪರದಾಡಿದ್ದಾರೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತದ ಹವಾಮಾನ ಇಲಾಖೆ ತಿಳಿಸಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *