
ಬೆಂಗಳೂರು: ಸ್ಥಳೀಯ ಸಂಸ್ಥೆಗಳ 25 ಸ್ಥಾನಗಳಿಗೆ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆ ದಿನೇ ದಿನೇ ರಂಗೇರತೊಡಗಿದೆ.
ಈ ಬಾರಿ ಪರಿಷತ್ ಚುನಾವಣೆಗೆ 47,368 ಪುರುಷ, 51,474 ಮಹಿಳೆಯರು ಹಾಗೂ ಮೂವರು ಇತರೆ ಮತದಾರರು ಸೇರಿ ಒಟ್ಟು 98,846 ಮಂದಿ ತಮ್ಮ ಹಕ್ಕು ಚಲಾಯಿಸಲು ಅರ್ಹತೆ ಪಡೆದಿದ್ದಾರೆ. ಇದಕ್ಕಾಗಿ 6,073 ಮತಗಟ್ಟೆಗಳ ವ್ಯವಸ್ಥೆ ಮಾಡಲಾಗುತ್ತಿದೆ.
ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರ ಸಭೆ, ಮಹಾನಗರ ಪಾಲಿಕೆ ಸದಸ್ಯರಿಗೆ ಈ ಬಾರಿ ಮತದಾನದ ಹಕ್ಕು ಇರಲಿದೆ. ಹಾಗಾಗಿ, ರಾಜಕೀಯ ಪಕ್ಷಗಳು ಗ್ರಾಮ ಪಂಚಾಯತಿ ಸದಸ್ಯರ ಕಡೆ ಮುಖ ಮಾಡಿದ್ದಾರೆ. ಆದರೆ, ಚುನಾವಣೆಯಲ್ಲಿ ಬಿಬಿಎಂಪಿ, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಸದಸ್ಯರು ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಅವಧಿ ಮುಗಿದಿರುವುದರಿಂದ ಈ ಸದಸ್ಯರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಚುನಾವಣಾ ಆಯೋಗ ಕೈಬಿಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

