ಅಪ್ಪು ಸ್ಮರಣಾರ್ಥ ನ.27, 28ರಂದು ಶೋಟೋಕಾನ್ ಕರಾಟೆ ಸ್ಪರ್ಧೆ

ಹುಬ್ಬಳ್ಳಿ: ಶೋಟೋಕಾನ್ ಕರಾಟೆ ಸಂಸ್ಥೆಯ ವತಿಯಿಂದ ಪವರ್ ಸ್ಟಾರ್‌ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರ ಸ್ಮರಣಾರ್ಥವಾಗಿ ಮೂರನೇ ರಾಷ್ಟ್ರೀಯ ಮಟ್ಟದ ಕರಾಟೆ ಮುಕ್ತ ಚಾಂಪಿಯನ್‌ಶಿಪ್ ಸ್ಪರ್ಧೆಯನ್ನು ನ.27 ಮತ್ತು 28ರಂದು ಇಲ್ಲಿನ ಹೊಸ ಕೋರ್ಟ್ ಹತ್ತಿರದ ಚೈತನ್ಯ ಸ್ಪೋರ್ಟ್ಸ್ ಫೌಂಡೇಶನ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಂಯೋಜಕ ದುರ್ಗಾನಂದ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡು ದಿನಗಳ ಕಾಲ ನಡೆಯುವ ರಾಷ್ಟ್ರಮಟ್ಟದ ಕರಾಟೆ ಮುಕ್ತ ಚಾಂಪಿಯನ್‌ಶಿಪ್ ಸ್ಪರ್ಧೆಯನ್ನು ನ.27 ರಂದು ಬೆಳಿಗ್ಗೆ 10 ಗಂಟೆಗೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಸ್ವರ್ಣ ಗ್ರುಪ್ ಕಂಪನೀಸ್ ವ್ಯವಸ್ಥಾಪಕ ನಿರ್ದೇಶಕ ಸಿ.ಎಚ್.ವಿ.ಎಸ್.ವಿ ಪ್ರಸಾದ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕ್ಯಾಪ್ಟನ್ ನವೀನ ನಾಗಪ್ಪ ಆಗಮಿಸುವರು, ವಿಶೇಷ ಆಮಂತ್ರಕರಾಗಿ ಶಾಸಕ ಪ್ರಸಾದ್ ಅಬ್ಬಯ್ಯ, ಮಾಜಿ ವಿಪ ಸದಸ್ಯ ನಾಗರಾಜ ಛಬ್ಬಿ, ಬಸವರಾಜ ಗುರಿಕಾರ, ಶ್ರೀಕಾಂತ ಮಲ್ಲೂರ ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.

ನ.28 ರಂದು ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಶಂಕರಪಾಟೀಲ ಮುನೇನಕೊಪ್ಪ, ರಮಣ ಮೂರ್ತಿ, ಮುತ್ತಣ್ಣ ಶಿವಳ್ಳಿ ಸೇರಿದಂತೆ ಮುಂತಾದ ಗಣ್ಯಮಾನ್ಯರು ಆಗಮಿಸಲಿದ್ದು, ಮಹಾರಾಷ್ಟ್ರ, ಕೇರಳ ಗೋವಾ ಸೇರಿದಂತೆ ದೇಶದ ವಿವಿಧ ರಾಜ್ಯ, ಜಿಲ್ಲೆಗಳ ಸುಮಾರು 50 ಕ್ಕೂ ಹೆಚ್ಚು ಕರಾಟೆ ಸ್ಪರ್ಧಾಳುಗಳು ಪಾಲ್ಗೊಳ್ಳಲಿದ್ದಾರೆ ಎಂದರು

Share News

About admin

Check Also

ಕೊರೋನಾ ಕುರಿತು ಸಿಎಂಗೆ ಪತ್ರ ಬರೆದ ವೃದ್ಯ

ಬೆಂಗಳೂರು: ರೂಪಾಂತರಿ ಮೂರನೇ ಅಲೆಯಲ್ಲಿ ರೋಗಿಗಳಿಗೆ ಉಸಿರಾಟದ ತೊಂದರೆ ಕಂಡು ಬರ್ತಿಲ್ಲ, ಸೋಂಕಿತರಲ್ಲಿ ಶೀತ, ಜ್ವರ ಬಿಟ್ಟರೆ ಬೇರೆ ಲಕ್ಷಣಗಳೇ ಇಲ್ಲ.  …

Leave a Reply

Your email address will not be published. Required fields are marked *

You cannot copy content of this page