Breaking News

ಕಸ್ಟಮರ್ ಕೇರ್ ಹೆಸರಿನಲ್ಲಿ ಯುವತಿಗೆ 2.75 ಲಕ್ಷ ರೂ. ವಂಚನೆ

ಹುಬ್ಬಳ್ಳಿ: ಕಸ್ಟಮರ್ ಕೇರ್‌ನಿಂದ ಕರೆ ಮಾಡಿರುವುದಾಗಿ ನಂಬಿಸಿ ಯುವತಿಯೊಬ್ಬರಿಗೆ 2.75 ಲಕ್ಷ ರೂ. ವಂಚಿಸಿದ ಪ್ರಕರಣ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಬ್ಯಾಂಕ್‌ವೊಂದರ ಕ್ರೆಡಿಟ್ ಕಾರ್ಡ್‌ನ 22,900 ರೂ. ಅನ್ನು ರದ್ದುಗೊಳಿಸುವುದಕ್ಕಾಗಿ ಯುವತಿಯು ಗೂಗಲ್‌ನಲ್ಲಿ ಬ್ಯಾಂಕಿನ ಕಸ್ಟಮರ್ ಕೇರ್ ನಂಬರ್ ಹುಡುಕಿದಾರೆ. ಆ ನಂಬರ್‌ಗೆ ಕರೆ ಮಾಡಿದಾಗ, ಕರೆ ಸ್ವೀಕರಿಸಿದ ವ್ಯಕ್ತಿ ಯುವತಿಯ ಮೊಬೈಲ್‌ಗೆ ಲಿಂಕ್‌ವೊಂದನ್ನು ಕಳುಹಿಸಿ ಅದರಲ್ಲಿ ಯುವತಿಯ ಹೆಸರು, ಮೊಬೈಲ್ ಸಂಖ್ಯೆ, ಬ್ಯಾಂಕ್ ವಿವರ ಭರ್ತಿ ಮಾಡುವಂತೆ ಸೂಚಿಸಿದ್ದಾನೆ.

ಯುವತಿಯು ಎಲ್ಲ ವಿವರಗಳನ್ನು ಲಿಂಕ್‌ನಲ್ಲಿ ಭರ್ತಿ ಮಾಡಿದ್ದಾಳೆ. ಕಸ್ಟಮರ್ ಕೇ‌ರ್‌ನಿಂದ ಮಾತನಾಡುತ್ತಿರುವುದಾಗಿ ಹೇಳಿದ ವ್ಯಕ್ತಿ ಯುವತಿಗೆ ವಾಟ್ಸಾಪ್ ಕಾಲ್ ಮಾಡಿ ಆ್ಯಪ್‌ವೊಂದನ್ನು ಇನ್‌ಸ್ಟಾಲ್ ಮಾಡಿಸಿದ್ದಾರೆ. ಯುವತಿಯ ಮೊಬೈಲ್‌ಗೆ ಬಂದ ಒಟಿಪಿ ಹಾಗೂ ಇತರ ಸಂದೇಶಗಳನ್ನು ತನ್ನ ಮೊಬೈಲ್‌ಗೆ ಬರುವಂತೆ ಮಾಡಿದ್ದಾನೆ. ನಂತರ ಕೆಲವೇ ಸಮಯದಲ್ಲಿ ಯುವತಿಯ ಬ್ಯಾಂಕ್ ಖಾತೆಯಿಂದ 1.50 ಲಕ್ಷ ರೂ. ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಯುವತಿಯ ಕ್ರೆಡಿಟ್‌ ಕಾರ್ಡ್‌ನಿಂದ 1.25 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ್ದಾನೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಯುವತಿಯು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *