Breaking News

ತಕ್ಷಣ ಅನ್ನದಾತನ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ ರೈತ ಮುಖಂಡ ಅರವಿಂದ ಏಗನಗೌಡರ

ಧಾರವಾಡ : ರಾಜ್ಯದಲ್ಲಿ ಎಡಬಿಡದೇ ಸುರಿದ ಮಳೆಯಿಂದಾಗಿ ನಾಡಿನ ಅನ್ನದಾತರ ಬದುಕು ಬೀದಿಗೆ ಬಿದ್ದಿದೆ. ಹೀಗಾಗಿ ರಾಜ್ಯ ಸರ್ಕಾರಿ ತಕ್ಷಣ ರೈತರ ನೋವಿಗೆ ಸ್ಪಂದಿಸುವ ಮೂಲಕ ಪರಿಹಾರ ಬಿಡುಗಡೆ ಮಾಡಬೇಕು ಎಂದು ಧಾರವಾಡದಲ್ಲಿ ರೈತ ಮುಖಂಡರು ಆಗ್ರಹಿಸಿದ್ದಾರೆ.

ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ನಂತರದಲ್ಲಿ ಮಾತನಾಡಿದ ರೈತ ಮುಖಂಡ ಅರವಿಂದ ಏಗನಗೌಡರ, ರಾಜ್ಯದಲ್ಲಿ ಎಡೆಬಿಡದೇ ಸುರಿದ ಮಳೆಯಿಂದಾಗಿ ರೈತನ ಬದುಕು ಬೀದಿಗೆ ಬಿದ್ದಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ. ಹಿಂಗಾರು ಬೆಳೆಗಳು ಕೊಚ್ಚಿ ಹೋಗಿವೆ, ಜತೆಗೆ ಹಲವಾರು ಮನೆಗಳು ಕೂಡ ಕುಸಿದು ಬಿದ್ದಿವೆ, ಅಕಾಲಿಕ ಮಳೆಯ ಅರ್ಭಟಕ್ಕೆ ಜನಸಾಮಾನ್ಯರ ಸ್ಥಿತಿ ಗಂಭೀರವಾಗಿದ್ದು ,ರಸ್ತೆ ಸಂಪರ್ಕಗಳಿಲ್ಲದೇ ಜನ ಪರದಾಡುತ್ತಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಜನಪ್ರತಿನಿದಿಗಳು ಚುನಾವಣೆ ಕಾರ್ಯದಲ್ಲಿ ತೊಡಗಿಕೊಂಡಿದ್ದು, ನೊಂದವರ ಕಡೆಗೆ ತಿರುಗಿಯೂ ನೋಡುತ್ತಿಲ್ಲ. ಕೇವಲ ಬಾಯಿಮಾತಿನಲ್ಲಿ ಪರಿಹಾರದ ಬಗ್ಗೆ ಮಾತನಾಡುವ ಮಾನ್ಯ ಮುಖ್ಯಮಂತ್ರಿಗಳು ಇಲ್ಲಿಯವರೆಗೂ ಒಂದು ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ,

ಹೀಗಾಗಿ ಈಗಲಾದರೂ ಸರ್ಕಾರ ಎಚ್ಚತ್ತುಕೊಳ್ಳುವ ಮೂಲಕ ರೈತರ ಮತ್ತು ನಾಡಿನ ಜನತೆಯ ನೋವಿಗೆ ಸ್ಪಂದಿಸ ಬೇಕಿದೆ. ಅಲ್ಲದೇ ತಕ್ಷಣಕ್ಕೆ ಸರ್ಕಾರವೂ ನಷ್ಟದಲ್ಲಿರುವ ಅನ್ನದಾತನಿಗೆ ಎಕರೆಗೆ 1 ಲಕ್ಷ ಹಾಗೂ ಭಾಗಶಹಃ ಕುಸಿದ ಮನೆಗಳಿಗೆ 5 ಲಕ್ಷ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *