Breaking News

ಬೆಂಗಳೂರು: ಜೆಎನ್​ಸಿಎಎಸ್​ಆರ್​ಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ

ಯಲಹಂಕ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೀರು ನುಗ್ಗಿ ಹಾನಿಗೊಳಲಾಗಿದ್ದ ಯಲಹಂಕದ ಜಕ್ಕೂರು ಬಳಿಯ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜೆಎನ್​ಸಿಎಎಸ್​ಆರ್​ ಸಂಸ್ಥೆಯ ಮುಖ್ಯಸ್ಥ, ‘ಭಾರತರತ್ನ’ ಸಿ.ಎನ್.ಆರ್.ರಾವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ಸಮಯದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಸಹ ಇದ್ದರು.

ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ, ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಗೆ ಮಳೆ ನೀರು ನುಗ್ಗಿತ್ತು. ಮೂರ್ನಾಲ್ಕು ದಿನಗಳಿಂದ ಮಳೆಯ ನೀರು ಹಾಗೆಯೇ ನಿಂತಿದೆ. ಸಂಶೋಧನಾ ಕೊಠಡಿಗೂ ಸಹ ನೀರು ನುಗ್ಗಿದ್ದು, ದಾಖಲೆಗಳು ಮತ್ತು ಕಂಪ್ಯೂಟರ್​ಗಳು ಹಾನಿಯಾಗಿವೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *