Breaking News

ಜಾಗೆ ವಿವಾದ: ಗುಡ್‌ ನ್ಯೂಸ್‌ ಕಾಲೇಜಿಗೆ ಬೀಗ ಹಾಕಿ ಪ್ರತಿಭಟನೆ

ಗುಡ್ ನ್ಯೂಸ್ ಕಾಲೇಜ್‌ಗೆ ಬೀಗ ಜಡಿದಿದ್ದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು


ಕಲಘಟಗಿ: ಪಟ್ಟಣದ ಗುಡ್ ನ್ಯೂಸ್ ಕಾಲೇಜ್‌ಗೆ ಬೀಗ ಜಡಿದಿದ್ದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆಯಿತು.
ಕಾಲೇಜ್‌ನ ಜಾಗದ ವಿಷಯಕ್ಕೆ ಸಂಭಂದಿಸಿದಂತೆ ಪಟ್ಟಣದ ನಾಸ್ತಿಕ ಎಂಬುವವರು, ಕಾಲೇಜ್‌ಗೆ ಬೀಗ ಜಡೆದಿದ್ದರು. ಹಲವು ವರ್ಷಗಳ ಹಿಂದೆಯೇ ಕಾಲೇಜ್ ನಿರ್ಮಾಣಕ್ಕೆ ಜಾಗೆ ನೀಡಿದ್ದ ನಾಸ್ತಿಕ ಎಂಬುವರು ಇದೀಗ ಮತ್ತೆ ಜಾಗ ಮರಳಿಸುವಂತೆ ಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ.


ಈ ಹಿನ್ನೆಲೆಯಲ್ಲಿ ಕಾಲೇಜ್‌ಗೆ ಬೀಗ ಜಡಿದ್ದರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದಂತೆಯೇ ನೂರಾರು ವಿದ್ಯಾರ್ಥಿಗಳು ಕಾಲೇಜ್ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು.
ಸುದ್ದಿ ತಿಳಿಯುತ್ತಿದ್ದಂತೆಯೇ, ಸ್ಥಳಕ್ಕೆ ತಹಸೀಲ್ದಾರ ಹಾಗೂ ಕಲಘಟಗಿ ಠಾಣೆ ಪೊಲೀಸರು ಭೇಟಿ ನೀಡಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಾಗೂ ಯಾವುದೇ ರೀತಿಯಿಂದ ತೊಂದರೆಯಾಗದAತೆ ಕಾಲೇಜ್‌ಗೆ ಹಾಕಿದ ಬೀಗವನ್ನು ತೆಗೆಸುವಲ್ಲಿ ಯಶಸ್ವಿಯಾದರು.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *