Breaking News

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಹೇಳುತ್ತಿದ್ದಂತೆ ಥೂ.. ಥೂ.. ಎಂದು ಗೇಲಿ ಮಾಡಿದ ರಮೇಶ್ ಜಾರಕಿಹೊಳಿ‌

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾಧ್ಯಮ ಕೇಳಲಾದ ಪ್ರಶ್ನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಥೂ ಥೂ ಎಂದು ಗೇಲಿ ಮಾಡಿದ ಪ್ರಸಂಗ ನಗರದಲ್ಲಿ ನಡೆಯಿತು.

ಪರಿಷತ್ ಚುನಾವಣೆ ಹೆಬ್ಬಾಳ್ಕರ್ ವರ್ಸಸ್ ಜಾರಕಿಹೊಳಿ‌ ಎಂಬ ಮಾಧ್ಯಮಗಳ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಹೆಸರು ಹೇಳುತ್ತಿದ್ದಂತೆ ಸಿಡಿಮಿಡಿಗೊಂಡ ರಮೇಶ್ ಜಾರಕಿಹೊಳಿ‌ ಅಸಮಾಧಾನ ವ್ಯಕ್ತಪಡಿಸಿದರು.ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಪರ ನಾಮಪತ್ರ ಸಲ್ಲಿಸಲಿದ್ದೇವೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡುತ್ತಿದ್ದೇವೆ. ನಾವು ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಬೇಕಿದೆ ಎಂದರು.

ಎರಡನೇ ಮತವನ್ನು ಲಖನ್ ಜಾರಕಿಹೊಳಿ‌ಗೆ ನೀಡುವಂತೆ ವರಿಷ್ಠರ ಭೇಟಿ ಮಾಡುತ್ತೇನೆ. ದೆಹಲಿಗೆ ತೆರಳಿ ವರಿಷ್ಠರ ಭೇಟಿಯಾಗಿ ಮನವೊಲಿಸುತ್ತೇನೆ. ಕಾಂಗ್ರೆಸ್ ಸೋಲಿಸಲು ವರಿಷ್ಠರು ನೀಡುವ ನಿರ್ದೇಶನಕ್ಕೆ ಬದ್ಧನಾಗಿರುತ್ತೇನೆ ಎಂದು ರಮೇಶ್​ ಜಾರಕಿಹೊಳಿ ಸ್ಪಷ್ಟಪಡಿಸಿದರು.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *