Breaking News

ಲವ್‌ ಫೇಲ್ಯೂವರ್-ಬೆಂಗಳೂರಲ್ಲಿ 3ನೇ ಮಹಡಿಯಿಂದ ಜಿಗಿದು SSLC ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಕಿಪೇಟೆಯಲ್ಲಿ ಎಸ್​ಎಸ್​​ಎಲ್​ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ತಮ್ಮ ಮನೆಯ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಅಕ್ಕಿಪೇಟೆ ನಿವಾಸಿ ದೂದ್ ರಾಮ್ ಮಾಲಿಯ ಎಂಬುವರ ಮಗಳು ಮೃತ ಬಾಲಕಿ ಎಂದು ತಿಳಿದು ಬಂದಿದೆ. ಕಳೆದ ರಾತ್ರಿ 9.30ಕ್ಕೆ ಈ ಘಟನೆ ನಡೆದಿದೆ. ಘಟನೆ ನಂತರ ಬಾಲಕಿ ತಂದೆ ಮಗಳ ಸ್ನೇಹಿತನಾಗಿದ್ದ ಬಾಲಕನ ವಿರುದ್ಧ ದೂರು ನೀಡಿದ್ದಾರೆ. ಮಗಳ ಸಾವಿನ ಹಿಂದೆ ಆತನ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಕಾಟನ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬಾಲಕಿಯ ಮೊಬೈಲ್ ನಂಬರ್ ಡಿಟೇಲ್ಸ್ ಹಾಗೂ ಇತರೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ ಬಾಲಕಿ ಹಲವು ದಿನಗಳಿಂದ ಸಹಪಾಠಿ ಬಾಲಕನನ್ನು ಪ್ರೀತಿಸುತ್ತಿದ್ದಳು.‌ ಇದಕ್ಕೆ ಆತ ಒಲ್ಲೆ ಎಂದಿದ್ದ ಎಂದು ತಿಳಿದುಬಂದಿದೆ‌.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *