Breaking News

ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಬೊಮ್ಮಾಯಿ ಸೂಚನೆ

ಬೆಂಗಳೂರು: ನಗರದಲ್ಲಿ ರಾಜಕಾಲುವೆ ಒತ್ತುವರಿಗಳನ್ನು ಮುಲಾಜಿಲ್ಲದೇ ತೆರವುಗೊಳಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಶ್ರೀಮಂತರು ಮಾಡಿರುವ ಒತ್ತುವರಿಗಳನ್ನು ಮೊದಲ ಹಂತದಲ್ಲಿ ತೆರವುಗೊಳಿಸಲಾಗುತ್ತದೆ. ಒತ್ತುವರಿ ಮಾಡಿರುವ ಬಡವರಿಗೆ ನಿವೇಶನಗಳನ್ನು ಒದಗಿಸಿ ನಂತರ ತೆರವು ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಳೆಯಿಂದ ಪ್ರವಾಹ ಉಂಟಾಗಿರುವ ಯಲಹಂಕ ಹಾಗೂ ಜಕ್ಕೂರು ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಮೀಸಲು ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ನಿರ್ಮಾಣವಾಗಿರುವ ಅಪಾರ್ಟ್‍ಮೆಂಟ್‍ಗಳನ್ನು ತೆರವು ಮಾಡುವಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಆದೇಶ ಇದೆ. ಮೀಸಲು ಪ್ರದೇಶದಲ್ಲಿ ಅಪಾರ್ಟ್‍ಮೆಂಟ್‍ಗಳಿರುವುದು ದೊಡ್ಡ ಪ್ರಮಾಣದಲ್ಲಿ ಮಳೆಯಾದಾಗಲೇ ಗೊತ್ತಾಗುತ್ತದೆ. ಮೀಸಲು ಪ್ರದೇಶದಲ್ಲಿರುವ ಅಪಾರ್ಟ್‍ಮೆಂಟ್ ಸಮುಚ್ಚಯಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಅಲ್ಲಿ ಮಳೆ ನೀರು ಹರಿದು ಹೋಗಲು ಅನುಕೂಲ ಕಲ್ಪಿಸಲು ಅವರು ಜಾಗ ಬಿಟ್ಟುಕೊಡಬೇಕು. ಇಲ್ಲದಿದ್ದರೆ ಅವರಿಗೇ ತೊಂದರೆ. ಈ ಕುರಿತು ಒಂದು ಅಭಿಯಾನ ನಡೆಸುತ್ತೇವೆ ಎಂದರು.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *