Breaking News

ರಮೇಶ ಅರವಿಂದ ಅಭಿನಯದ‌ 100 ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ

ಹುಬ್ಬಳ್ಳಿ: ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಉಮಾ ಹಾಗೂ ಎಂ.ರಮೇಶ ರೆಡ್ಡಿ ನಿರ್ಮಾಣಗೊಂಡಿರುವ 100 ಶೀರ್ಷಕೆಯ ಕನ್ನಡ ಚಿತ್ರ ಇದೇ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ ಎಂದು ನಟ ಹಾಗೂ ಚಿತ್ರ ನಿರ್ದೇಶಕ ರಮೇಶ ಅರವಿಂದ ಹೇಳಿದರು.

ಮಾದ್ಯಮದ ಜೊತೆ ಮಾತನಾಡಿದ ಅವರು, ಚಿತ್ರದ ನಿರ್ದೇಶನವನ್ನು ಮಾಡುವ ಮೂಲಕ ಚಿತ್ರದಲ್ಲಿ ನನ್ನ ಎಲ್ಲ ಶಕ್ತಿಯನ್ನು ಹಾಕಿ ನಟಿಸಿದ್ದೇನೆ ಎಂದರು.

ಚಿತ್ರದಲ್ಲಿ ರಚಿತಾ ರಾಮ್, ಪೂರ್ಣ, ವಿಶ್ವಕರ್ಣ, ಮಾಲತಿ ಸುಧೀರ್, ಗೌರವ ಪ್ರಕಾಶ ಬೆಳವಾಡಿ, ರಾಜು ತಾಳಿಕೋಟಿ, ಶೋಭರಾಜ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಅಲ್ಲದೇ ಪ್ರಸ್ತುತ ದಿನಮಾನಗಳಲ್ಲಿ ನಡೆಯುವ ಸಾಮಾಜಿಕ ಜಾಲತಾಣದ ವಿಷಯ ವಸ್ತುಗಳನ್ನು ಒಳಗೊಂಡ ಕಥಾ ಹಂದಿರವೇ ಈ 100 ಸಿನಿಮಾ ಎಂದು ಅವರು ಹೇಳಿದರು.

ಒಟ್ಟು ನಾಲ್ಕು ಹಾಡುಗಳನ್ನು ಹೊಂದಿರುವ ಚಿತ್ರವಾಗಿದ್ದು, ಸಿನಿ ಪ್ರೀಯರಿಗೆ ಹೊಸ ಅನುಭವ ಹಾಗೂ ಹೊಸ ಚಿತ್ರ ಪರಿಚಯವನ್ನು ಮಾಡುವ ವಿನೂತನ ಪ್ರಯತ್ನವೊಂದನ್ನು ಮಾಡಿದ್ದೇವೆ ಎಂದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *