Breaking News

ಡ್ರೈನೇಜ್​ ಪೈಪಲ್ಲಿ ಹರಿದು ಬಂತು ಹಣ.. ಪಿಡಬ್ಲ್ಯೂಡಿ ಜೆಇ ಪ್ಲಾನ್​ಗೆ ಎಸಿಬಿ ಅಧಿಕಾರಿಗಳೇ ದಂಗು

ಕಲಬುರಗಿ : ಇಲ್ಲಿ ಬುಧವಾರ ನಡೆದ ಎಸಿಬಿ ದಾಳಿ ವೇಳೆ ನೀರಿನ ಪೈಪಿನಲ್ಲಿ ಕಂತೆ ಕಂತೆ ನೋಟುಗಳನ್ನು ಕಂಡು ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ.
ಪಿಡಬ್ಲೂಡಿ ಇಲಾಖೆಯ ಶಾಂತಗೌಡ ಅವರ ಮನೆಯ ಬಾತ್ ರೂಂ ಮತ್ತು ವಾಶ್ ಬೇಸಿನ್ ಪೈಪ್​ನಲ್ಲಿ ದುಡ್ಡಿನ ಕಂತೆ ಅಡಗಿಸಿಟ್ಟಿರುವುದು ಎಸಿಬಿ ಅಧಿಕಾರಿಗಳ ದಾಳಿ ವೇಳೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಗುಬ್ಬಿ ಕಾಲೋನಿಯಲ್ಲಿರುವ ಮನೆಯ ಪೈಪ್​ನಲ್ಲಿ ಹಣ ಪತ್ತೆಯಾಗಿದೆ.
ಅಲ್ಲದೆ ಯಡ್ರಾಮಿಯಲ್ಲಿರುವ ತೋಟದ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳು, ಜೆ.ಇ. ಶಾಂತಗೌಡ ಬಿರಾದಾರ್‌ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಮನೆಯ ಪೈಪ್​ನಲ್ಲಿ ಪತ್ತೆಯಾದ ಹಣ ಹೊರತೆಗೆಯುತ್ತಿರುವ ಅಧಿಕಾರಿಗಳು


ಎಸಿಬಿ ದಾಳಿ ನಡೆದಾಗ ಹಣವನ್ನು ಪೈಪ್ ನಲ್ಲಿ ತುಂಬಿರುವ ಶಂಕೆ ವ್ಯಕ್ತವಾಗಿದೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ರಾಜ್ಯದ 68 ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ಭಾರಿ ಪ್ರಮಾಣದ ಚಿನ್ನಾಭರಣ, ನಗದು ಪತ್ತೆಯಾಗಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಹಿನ್ನಲೆಯಲ್ಲಿ 408 ಎಸಿಬಿ ಅಧಿಕಾರಿಗಳು ರಾಜ್ಯದಾಧ್ಯಂತ ಏಕ ಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *