Breaking News

ರಾಜ್ಯಾದ್ಯಂತ ಭ್ರಷ್ಟರಿಗೆ ಬಲೆ.. ಕೋಟ್ಯಂತರ ಮೌಲ್ಯದ ಚಿನ್ನಾಭರಣ ಪತ್ತೆ, ಮುಂದುವರೆದ

ಬೆಂಗಳೂರು: ಅಧಿಕಾರ ಪ್ರಭಾವ ಬಳಸಿ ಅಕ್ರಮ ಆಸ್ತಿ ಗಳಿಕೆ ಆರೋಪದಡಿ‌ ಇಂದು ಬೆಳ್ಳಂಬೆಳ್ಳಗೆ ರಾಜ್ಯದೆಲ್ಲೆಡೆ 15 ಸರ್ಕಾರಿ ಅಧಿಕಾರಿಗಳ ಮನೆ-ಕಚೇರಿ ಸೇರಿದಂತೆ 60 ಕಡೆಗಳಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ಚುರುಕುಗೊಳಿಸಿದ್ದಾರೆ.

ಮೂವರು ಎಸ್ಪಿಗಳ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಮಂದಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ವಿಶೇಷ ತಂಡಗಳಾಗಿ ಪ್ರತ್ಯೇಕ ಕಡೆಗಳಲ್ಲಿ ರಾಜ್ಯಾದ್ಯಂತ ದಾಳಿ ನಡೆಸಿ, ಶೋಧ ನಡೆಸುತ್ತಿದ್ದಾರೆ. ದಾಳಿ ವೇಳೆ ಹಲವರ ಮನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಆಸ್ತಿಪತ್ರಗಳು ಪತ್ತೆಯಾಗಿವೆ. ದಾಳಿ ವೇಳೆ ದೊರೆತ ಚಿನ್ನಾಭರಣಗಳ ಮೂಲದ ಬಗ್ಗೆ ಅಧಿಕಾರಿಗಳು ತಲಾಶ್ ನಡೆಸುತ್ತಿದ್ದಾರೆ.

ಈ ವೇಳೆ ಅಕ್ರಮ ಆಸ್ತಿ ಗಳಿಕೆ ದಾಖಲೆಗಳ ಲಭ್ಯವಾಗಿವೆ. ಅಕ್ರಮ ಹಾಗು ದಾಖಲೆಯಿಲ್ಲದ ಹಣ ದಾಳಿ ನಡೆಸಿದವರ ಮನೆಗಳಲ್ಲಿ ಕೆ‌.ಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾಗಿ ಗದಗದಲ್ಲಿ ಕೆಲಸ ಮಾಡುತ್ತಿರುವ ಟಿ.ಎಸ್. ರುದ್ರೇಶಪ್ಪ ಮನೆಯಲ್ಲಿ ಅಂದಾಜು 3.5 ಕೋಟಿ ರೂ. ಮೌಲ್ಯದ 7 ಕೆ.ಜಿ‌ ಚಿನ್ನ ಹಾಗೂ 15 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ‌.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *