ಧಾರವಾಡ : ಕೊರೋನಾ ಮುಕ್ತ ಜಿಲ್ಲೆಯಾಗಿದ್ದ ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಮತ್ತೇ ಅಬ್ಬರಿಸಿದೆ. ಧಾರವಾಡದ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಹೌದು, ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳಿಗೆ ಆರಂಭದಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ 300 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ತಪಾಸಣೆ ವೇಳೆ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟು ವರದಿಯಾಗಿದೆ. ಎಸ್ ಡಿಎಮ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಭೇಟಿ ನೀಡಿದ್ದು,

ಈಗಾಗಲೇ 300 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 66 ಜನ ವಿದ್ಯಾರ್ಥಿಗಳ ಫಲಿತಾಂಶ ಪಾಸಿಟಿವ್ ವರದಿಯಾಗಿದೆ ಅವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಯ 3 ಸಾವಿರ ಸಿಬ್ಬಂದಿಗಳಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ. ಅವರಿಗೂ ಪಾಸಿಟಿವ್ ವರದಿಯಾದರೆ ಚಿಕಿತ್ಸೆ ನೀಡಲಾಗುತ್ತದೆ. ಎರಡು ಹಾಸ್ಟೆಲ್ ಸಿಲ್ಡೌನ್ ಮಾಡಿ,ಅವರಿಗೆ ಸೂಕ್ತ ಚಿಕಿತ್ಸೆ ಊಟ ವ್ಯವಸ್ಥೆಯನ್ನು ಹಾಸ್ಟೆಲ್ ಒಳಗಡೆ ಮಾಡಲಾಗಿದೆ ಎಂದರು. ಕಳೆದ ವಾರದ ಹಿಂದೆ ಒಂದು ಇವೆಂಟ್ ನಡೆದಿತ್ತು ಅದರಲ್ಲಿ ಭಾಗವಹಿಸಿದವರಿಗೆ
ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ. ಇದರಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ. ಈಗಾಗಲೇ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಡ್ ತಪಾಸಣೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾ
bigtvnews | Hubli Dharwad News | Kannada News | Karnataka News Hubli News | News In Hubli | Local news

