ಹುಬ್ಬಳ್ಳಿ: ಕಂಠಪೂರ್ತಿ ಮದ್ಯ ಸೇವಿಸಿದ್ದ ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ನೀರಿನ ಡ್ರಮ್‌ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಗೋಕುಲ ರೋಡ್ ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ನಡೆದಿದೆ.
ವೆಂಕಟೇಶ ಕೊತ್ತಲ್ (49) ಮೃತಪಟ್ಟ ವ್ಯಕ್ತಿ. ಈತ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ, ವಿಪರೀತ ಮದ್ಯ ಸೇವಿಸುತ್ತಿದ್ದ. ನ.22ರಿಂದ 24ರ ನಡುವಿನ ಅವಧಿಯಲ್ಲಿ ಮದ್ಯದ ಅಮಲಿನಲ್ಲಿ ಬಚ್ಚಲು ಕಟ್ಟೆ ಬಳಿ ಇಟ್ಟಿದ್ದ ಬೃಹತ್ ನೀರಿನ ಡ್ರಮ್‌ನಲ್ಲಿ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾನೆ ಎಂದು ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾರಸುದಾರರಿಲ್ಲ: ವೆಂಕಟೇಶ 5.6 ಅಡಿ ಎತ್ತರ, ಸಾದಗಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದಾನೆ. ಈತನ ವಾರಸುದಾರರು ಯಾರಾದರೂ ಇದ್ದಲ್ಲಿ ದೂ.ಸಂ. 0836-2233525 ಅಥವಾ ಮೊ.ಸಂ. 94808 02047ಗೆ ಸಂಪರ್ಕಿಸುವಂತೆ ಕೋರಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

