Breaking News

2 ಗುಂಪಿನ ಯುವಕರ ನಡುವೆ ಮಾರಾಮಾರಿ-ಚಿಕ್ಕಮಗಳೂರಲ್ಲಿ ನೆಡೆದ ಘಟನೆ

ಚಿಕ್ಕಮಗಳೂರು: ನಗರದಲ್ಲಿ ಪುಂಡರ ದಾಂಧಲೆ ಮಿತಿ ಮೀರಿ ಹೋಗುತ್ತಿದೆ. ನಗರದ ಹೃದಯಭಾಗ ಐ.ಜಿ ರಸ್ತೆಯಲ್ಲಿ 2 ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಸೌಟು, ಬಾಂಡ್ಲಿ, ಸೌದೆ, ಕುರ್ಚಿಯಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಪೊಲೀಸರ ಭಯವಿಲ್ಲದೇ ರೌಡಿಗಳಂತೆ ರಸ್ತೆ ಮಧ್ಯೆದಲ್ಲಿ ಪುಂಡರ ಬಡಿದಾಟ ನೋಡಿ ಜನರು ದಂಗಾಗಿದ್ದಾರೆ. ಯಾವ ಕಾರಣಕ್ಕಾಗಿ ಪುಂಡರು ಈ ರೀತಿ ಹೊಡೆದಾಡಿಕೊಂಡಿದ್ದಾರೆ, ಎಂಬುದು ತಿಳಿದು ಬಂದಿಲ್ಲ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About admin

Check Also

ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

ಬೆಂಗಳೂರು : ದಲಿತ ಮಹಿಳೆಯನ್ನು ಎಂಎಸ್‌ಐಎಲ್ ಅಧಿಕಾರಿಗಳು ಇದೀಗ ಅವಮಾನ ಮಾಡಿದ್ದಾರೆ. ಎಂಎಸ್‌ಐಎಲ್ ನಲ್ಲಿ ಕೆಲಸ ಮಾಡುತ್ತಿರುವ ದಲಿತ ಮಹಿಳೆಯ …

Leave a Reply

Your email address will not be published. Required fields are marked *