ಮೈಸೂರು: ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ ಅವರು ಪತ್ನಿ ಗೀತಾ ಶಿವರಾಜ್‍ಕುಮಾರ್ ಅವರ ಜೊತೆಗೆ ಮೈಸೂರಿಲ್ಲಿರುವ ಶಕ್ತಿಧಾಮಕ್ಕೆ ಭೆಟಿಕೊಟ್ಟು ಅಲ್ಲಿಯ ನಿರ್ವಹಣೆಯ ಕುರಿತಾಗಿ ವಿಚಾರಿಸಿದ್ದಾರೆ.

ಶಕ್ತಿಧಾಮ ನಿರ್ವಹಣೆ ಕುರಿತಂತೆ ಧರ್ಮದರ್ಶಿಗಳ ಸಭೆ ಮಾಡಿದ್ದಾರೆ. ಟ್ರಸ್ಟ್ ಅಧ್ಯಕ್ಷೆ ಗೀತಾ ಶಿವರಾಜ್‍ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಾಗಿದೆ. ಸಭೆಯಲ್ಲಿ ಟ್ರಸ್ಟ್ ಉಪಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ, ಮ್ಯಾನೇಂಜಿಂಗ್ ಟ್ರಸ್ಟಿ ಜಯದೇವ್, ಖಜಾಂಚಿ ಸುಮನ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. 150 ಮಕ್ಕಳ ಹಾರೈಕೆ, ಶಿಕ್ಷಣ ಕುರಿತಂತೆ ಚರ್ಚೆ ನಡೆಸಲಾಗಿದೆ. ಶಕ್ತಿಧಾಮಕ್ಕೆ ದೊಡ್ಡ ಮಟ್ಟದಲ್ಲಿ ಸಾಥ್ ನೀಡಿದ್ದ ಅಪ್ಪು ನಿಧನದ ಬಳಿಕ ಮೊದಲ ಬಾರಿಗೆ ಭೇಟಿ ನೀಡಿ ಮಕ್ಕಳೊಂದಿಗೂ ಚರ್ಚೆ ಮಾಡಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

