Breaking News

ಎರಡು ತಲೆ, ಮೂರು ಕಣ್ಣುಳ್ಳ ವಿಚಿತ್ರ ಕರು ಜನನ- ಕರು ನೋಡಲು ಮುಗಿಬಿದ್ದ ಜನರು

ಮೈಸೂರು: ಎರಡು ತಲೆ, ಮೂರು ಕಣ್ಣುಗಳಿರುವ ವಿಚಿತ್ರ ಕರುವೊಂದು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೊಮ್ಮರಗಳ್ಳಿ ಗ್ರಾಮದಲ್ಲಿ ಜನಿಸಿದ್ದು, ಕರು ನೋಡಲು ಜನರು ಮುಗಿ ಬೀಳುತ್ತಿದ್ದಾರೆ.

ಹೊಮ್ಮರಗಳ್ಳಿ ನಿವಾಸಿ ಮಹದೇವಪ್ಪ ಅವರ ಮನೆಯ ಸೀಮೆ ಹಸು‌ ಈ ವಿಚಿತ್ರ ಕರುವಿಗೆ ಜನ್ಮ ನೀಡಿದೆ. ಎರಡು ತಲೆ, ಮೂರು ಕಣ್ಣನ್ನು ಈ ಕರು ಹೊಂದಿದ್ದು, ಈ ಅದ್ಭುತವನ್ನು ನೋಡಿದ ಮನೆ ಮಂದಿ‌ ಸಂತಸಗೊಂಡಿದ್ದಾರೆ.

ಈ ಕುರಿತು ‘ಈಟಿವಿ ಭಾರತ’ದ ಜೊತೆ ದೂರವಾಣಿಯಲ್ಲಿ ಮಾತನಾಡಿದ ಮಹದೇವಪ್ಪ, ಹಸುವಿಗೆ ಇದು ಮೂರನೇ ಕರುವಾಗಿದ್ದು, ಮೊದಲೆರಡು ಕರುಗಳು ಸಹಜವಾಗಿಯೇ ಜನಿಸಿವೆ. ಮೂರನೇ ಕರುವಾದ ಇದು ಮಾತ್ರ ವಿಶೇಷವಾಗಿದೆ. ಎರಡು ತಲೆಗಳ ನಡುವೆ ಒಂದು ಕಣ್ಣಿದ್ದು, ಒಟ್ಟು ಮೂರು ಕಣ್ಣುಗಳನ್ನು ಹೊಂದಿದೆ. ಹಸು ಹಾಗೂ ಕರು ಆರೋಗ್ಯವಾಗಿದ್ದು, ಹಾಲು ಸಹ ಕುಡಿಯುತ್ತಿದೆ ಎಂದರು.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *