Breaking News

ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೊನಾ ಸೋಂಕು ದೃಢ

ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ದೇಶದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್​​​ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇವರಲ್ಲಿ ಹೊಸ ತಳಿಯ ವೈರಸ್ ಕಂಡು ಬಂದಿರುವುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ

Share News

About admin

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *