Breaking News

ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟಿರುವ ಘಟನೆ

ಹುಬ್ಬಳ್ಳಿ: ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟಿರುವ ಘಟನೆ ಇಲ್ಲಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4 ತಾರಿಹಾಳ ಬಳಿ ನಡೆದಿದೆ.

ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಕಾರು, ಹಾಗೂ ಹುಬ್ಬಳ್ಳಿ ಕಡೆಯಿಂದ ಧಾರವಾಡ ಕಡೆಗೆ ಹೊರಟ್ಟಿದ್ದ ಖಾಸಗಿ ಬಸ್ಸ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪಿದ್ದರೇ, ಮೂವರಿಗೆ ಗಂಭೀರಗಾಯಗಳಾಗಿವೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತ ಮತ್ತು ಗಾಯಗೊಂಡರ ಕುರಿತು ಸಂಪೂರ್ಣ ಮಾಹಿತಿ ದೊರೆತಿಲ್ಲಾ, ಇನ್ನೂ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಕೂಡಾ ಹಾನಿಯಾಗಿದೆ. ಸ್ಥಳಕ್ಕೆ ಸಂಚಾರಿ ಪೋಲಿಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *