Featured Video Play Icon

ಧಾರವಾಡದ ಡಿಸಿ ಕಚೇರಿ ಎದುರೇ ಡಿಶುಂ ಡಿಶುಂ…

ಧಾರವಾಡ: ಬಡ್ಡಿ ಹಣಕ್ಕಾಗಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರೇ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಪೊಲೀಸರು ಮೂಕ ಪ್ರೇಕ್ಷಕರಾಗಿ ನೋಡುತ್ತ ನಿಂತಿದ್ದರು.

ಜಿಲ್ಲಾಧಿಕಾರಿ ಬಳಿ ಬಂದ ಏಳೆಂಟು ಜನ ಹಣದ ವ್ಯವಹಾರಕ್ಕಾಗಿ ವಾಗ್ವಾದ ನಡೆಸಿದರು. ಈ ವೇಳೆ ಪೊಲೀಸ್ ಪೇದೆಯೊಬ್ಬರು ಬಂದು ಇಲ್ಲಿಂದ ಆಕಡೆ ಹೋಗಿ ಇದು ಡಿಸಿ ಕಚೇರಿ ಎಂದು ಹೇಳಿದರೂ ಕೇಳದ ಆ ಗುಂಪು ಅಲ್ಲೇ ವಾಗ್ವಾದ ನಡೆಸಿತು.

ನಂತರ ಮಾತಿಗೆ ಮಾತು ಬೆಳೆದು ಎರಡೂ ಗುಂಪುಗಳ ಮಧ್ಯೆ ಜಿಲ್ಲಾಧಿಕಾರಿ ಕಚೇರಿ ಎದುರೇ ತೀವ್ರ ಮಾರಾಮಾರಿ ನಡೆದಿದೆ. ಇಷ್ಟೆಲ್ಲ ನಡೆಯುತ್ತ ನಿಂತಿದ್ದರೂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪೊಲೀಸರು ಈ ದೃಶ್ಯವನ್ನು ನೋಡುತ್ತ ನಿಂತಿದ್ದರು.

ಹಣದ ವ್ಯವಹಾರಕ್ಕಾಗಿ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ನಿನ್ನೆಯಷ್ಟೇ ಮೀಟರ್ ಬಡ್ಡಿ ಕಿರುಕುಳದಿಂದ ಬೇಸತ್ತು ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

Share News

About BigTv News

Check Also

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ …

Leave a Reply

Your email address will not be published. Required fields are marked *

You cannot copy content of this page