Breaking News

ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಕ್ಕೆ ನಿರ್ಬಂಧ ಹೇರುವುದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಜಿನ್ಯೂಂ ಸಿಕ್ವೇನ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಕಳುಹಿಸಿ ಕೊಡಲಾಗಿತ್ತು. ಟೆಸ್ಟ್ ವರದಿ ಕಳೆದ ರಾತ್ರಿ ಬಂದಿದೆ. ಯಾರಿಗೂ ಪಾಸಿಟಿವ್ ಬಂದಿಲ್ಲ. ಜನರು ಆತಂಕ ಪಡಬಾರದು.
ಫಸ್ಟ್ ಡೋಸ್ 90% ಲಸಿಕಾಕರಣ ಆಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ್

ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮನೆ ಮನೆಗೆ ಹೋಗಿ ಲಸಿಕೆ ವಿತರಣೆ ಮಾಡುತ್ತಿದ್ದೇವೆ. ಎರಡುವರೆ ಲಕ್ಷ ಲಸಿಕೆ ನಮ್ಮ ಬಳಿ ಲಭ್ಯವಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ 4 ಜನರಿಗೆ ಪಾಸಿಟಿವ್ ಬಂದಿದೆ. ಧಾರವಾಡದಲ್ಲಿ ಹೊಸದಾಗಿ ಇಬ್ಬರಿಗೆ ಪಾಸಿಟಿವ್ ಬಂದಿದೆ ಎಂದರು.

ಇನ್ನೂ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಯ ಸುತ್ತಲಿನ ಶಾಲಾ ಕಾಲೇಜುಗಳು ಮತ್ತೆ ನಾಳೆಯಿಂದ ಆರಂಭ ಮಾಡುತ್ತೇವೆ. ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳಿಗೆ ನಿರ್ಬಂಧ ಹೇರಲ್ಲ. ನಿರ್ಬಂಧ ಹೇರಲು ಅವಕಾಶ ಇಲ್ಲ.ಧಾರವಾಡ ಜಿಲ್ಲೆಯಲ್ಲಿ ಪ್ರತಿನಿತ್ಯ ಸಾವಿರ ಜನರಿಗೆ ಟೆಸ್ಟ್ ಮಾಡುತ್ತಿದ್ದೇವೆ ಎಂದರು

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *