Breaking News

ಗೌರಿ ಲಂಕೇಶ್‌ ಹತ್ಯೆ ಪ್ರಕರಣ-ಇಂದು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೈಕ್ ಕಳ್ಳತನ ಆರೋಪದ ವಿಚಾರಣೆಗಾಗಿ ಪೊಲೀಸರು ಹುಬ್ಬಳ್ಳಿ 1ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಗೌರಿ ಹತ್ಯೆ ಪ್ರಕರಣದಲ್ಲಿ ಬೈಕ್‌ ಬಳಸಲಾಗಿತ್ತು. ಆ ಬೈಕನ್ನು ಹುಬ್ಬಳ್ಳಿ ತಾಲೂಕಿನ ಮಾವನೂರಲ್ಲಿ ಕಳ್ಳತನ ಮಾಡಲಾಗಿತ್ತು. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ.

ಮಧ್ಯಾಹ್ನ 3 ಗಂಟೆಗೆ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನಂತರ ಮುಂಬೈಗೆ ಕಳುಹಿಸಲಾಗುವುದು ಎಂದು ಗ್ರಾಮೀಣ ಠಾಣೆ ಸಿಪಿಐ ರಮೇಶ ತಿಳಿಸಿದ್ದಾರೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *