Breaking News

ಹುಬ್ಬಳ್ಳಿಯಲ್ಲಿ 9ನೇ ತರಗತಿ ವಿದ್ಯಾರ್ಥಿಗೆ ಕೋವಿಡ್ ದೃಢ – ಭಾನುವಾರದೊರೆಗೂ ಶಾಲೆಗೆ ರಜೆ

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ 9ನೇ ತರಗತಿ ವಿದ್ಯಾರ್ಥಿಗೂ ವಕ್ಕರಿಸಿದ ಕೊರೊನಾ ವಕ್ಕರಿಸಿದ್ದು ಶಾಲೆಗೆ ರಜೆ ಘೋಷಿಸಲಾಗಿದೆ. ನಗರದ ಖಾಸಗಿ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯ ಸಹೋದರಿ ಧಾರವಾಡದ SDM ಕಾಲೇಜಿನಲ್ಲಿ MBBS ವ್ಯಾಸಂಗ ಮಾಡುತ್ತಿದ್ದಾಳೆ.

MBBS ವಿದ್ಯಾರ್ಥಿನಿಗೆ ಪಾಸಿಟಿವ್ ಬಂದಿದ್ದರಿಂದ ಅವರ ಮನೆಯಲ್ಲಿರುವ ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದರಿಂದ ಬಾಲಕನಿಗೂ ಕೊರೊನಾ ಪಾಸಿಟಿವ್ ಧೃಡ ಪಟ್ಟಿದ್ದು,ನಗರದ ಆದರ್ಶನಗರದಲ್ಲಿರುವ G.V.JOSHI ರೋಟರಿ ಶಾಲೆಯ ಬಾಲಕನನ್ನು ಈಗಾಗಲೇ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಮಾಡಲಾಗಿದೆ.ಜೊತೆಗೆ ನಿನ್ನೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಇವತ್ತು ಮುಂಜಾನೆ ವರದಿ ಬಂದಿದೆ. ಶಾಲೆಯನ್ನು ಸಂಪೂರ್ಣವಾಗಿ ಸ್ಯಾನಿಟೈಜೆಷನ್ ಮಾಡಲಾಗುತ್ತಿದೆ.ಇಂದು ಮದ್ಯಾಹ್ನ ದಿಂದಲೆ ಶಾಲೆಯಿಂದ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ.

ಈ ಕುರಿತಂತೆ ಮಾತನಾಡಿದ ಪ್ರಾಂಶುಪಾಲ ನರೇಶ ಪಾಟೀಲ್ ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲೆಯಲ್ಲಿರುವ ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಲಾಗುತ್ತದೆ. ಜೊತೆಗೆ ಸೋಮವಾರದವರೆಗೆ ರೋಟರಿ ಶಾಲೆಗೆ ರಜೆ ನೀಡಲಾಗಿದೆ ಎಂದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *