ಶಿವಮೊಗ್ಗ: ನಂಜಪ್ಪ ನರ್ಸಿಂಗ್ ಕಾಲೇಜಿನ 13 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ವಿದ್ಯಾರ್ಥಿಗಳೆಲ್ಲರೂ ಕೇರಳದಿಂದ ವಾಪಸ್ಸಾಗಿದ್ದರು ಎಂದು ತಿಳಿದುಬಂದಿದೆ. ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಸೆಂಟರ್ನಲ್ಲಿ ಇರಿಸಲಾಗಿದೆ. ನಂಜಪ್ಪ ಲೈಫ್ ಕೇರ್ ಹಾಗೂ ನಂಜಪ್ಪ ನರ್ಸಿಂಗ್ ಕಾಲೇಜನ್ನು ಸೀಲ್ಡೌನ್ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳ ಪರೀಕ್ಷಾ ವರದಿಗಾಗಿ ಕಾಯಲಾಗುತ್ತಿದೆ.

ಧಾರವಾಡ ಮತ್ತು ಮೈಸೂರು ಜಿಲ್ಲೆಗಳ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಮೊದಲು ಕೋವಿಡ್ ಕಂಡು ಬಂದಿತ್ತು. ಧಾರವಾಡ ಜಿಲ್ಲೆಯಲ್ಲಿ ಭಾನುವಾರದಿಂದ ಯಾವುದೇ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ಆದ್ರೆ ಎಸ್ಡಿಎಮ್ ವೈದ್ಯಕೀಯ ಕಾಲೇಜಿನ ಪ್ರಕರಣಗಳೂ ಸೇರಿ ಒಟ್ಟು 311 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಎಂದು ನಿನ್ನೆ ಜಿಲ್ಲಾಡಳಿತ ಮಾಹಿತಿ ನೀಡಿತ್ತು.
ಕಳೆದೆರಡು ದಿನಗಳ ಹಿಂದೆ ಮೈಸೂರಿನಲ್ಲಿ ಸುಮಾರು 50 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೊನಾ ಕಂಡು ಬಂದಿತ್ತು. ಇವರೆಲ್ಲರಿಗೂ ಚಿಕಿತ್ಸೆ ಮುಂದವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

