ಚಾಮರಾಜನಗರ: ಟಿಪ್ಪರ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಗುಂಡ್ಲುಪೇಟೆಯ ಎಪಿಎಂಸಿ ಸಮೀಪ ನಡೆದಿದೆ.

ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿದೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.ಗಾಯಾಳುಗಳನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

