ಉಳ್ಳಾಲ (ಮಂಗಳೂರು): ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ತಲಪಾಡಿಯ ಬಳಿ ಶಾಲೆಗೆ ತೆರಳುವ ವೇಳೆ ಆರೋಪಿ ಅಡ್ಡಗಟ್ಟಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿ ಪರಾರಿಯಾಗಿದ್ದ.

ಈ ಸಂಬಂಧ ಉಳ್ಳಾಲ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಈ ದೂರಿನ ಮೇರೆಗೆ ಸುತ್ತಲಿನ ಸಿಸಿಟಿವಿ ದೃಶ್ಯಗಳ ಆಧರಿಸಿ ಆರೋಪಿ ರಾಶಿಕ್ (22) ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿ ಮಂಗಳೂರಿನ ಕೆ.ಸಿ ರೋಡ್ನ ಮುಳ್ಳುಗುಡ್ಡೆ ನಿವಾಸಿಯಾಗಿದ್ದು, ನಿನ್ನೆ ಬೆಳಗ್ಗೆ 14 ವರ್ಷದ ಬಾಲಕಿಯೊಬ್ಬಳು ತನ್ನ ತಂಗಿಯೊಂದಿಗೆ ತಲಪಾಡಿ ಅಲಂಕಾರುಗುಡ್ಡೆಯಿಂದ ಕಾಲ್ನಡಿಗೆಯಲ್ಲಿ ತಲಪಾಡಿ ಬಳಿ ತೆರಳುತ್ತಿದ್ದ ವೇಳೆ ಆಕೆಯ ಕೈ ಹಿಡಿದು ಎಳೆದಾಡಿದ್ದ ಬಳಿಕ ಅಲ್ಲಿಂದ ಪರಾರಿಯಾಗಿದ್ದ. ಈ ಹಿಂದೆಯೂ ಈತನ ಮೇಲೆ ಕಿರುಕುಳ ನೀಡಿದ್ದ ಆರೋಪ ಕೇಳಿ ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

