ತವರಿನಲ್ಲಿ ಕೈ ಜಾರಿದ್ದ ಸ್ಥಾನವನ್ನು ದಕ್ಕಿಸಿಕೊಳ್ಳೊಕೆ ಪರಿಷತ್‌ ಚುನಾವಣಾ ಮೂಲಕ ಬಿಎಸ್‌ ವೈ ರಣತಂತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಜಿಲ್ಲೆ ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್ ತೆಕ್ಕೆಯಿಂದ ಮರಳಿ ಸ್ಥಾನವನ್ನು ದಕ್ಕಿಸಿಕೊಳ್ಳುವ ಮೂಲಕ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಲು ಮುಂದಾಗಿದ್ದಾರೆ.

ಉಪ ಸಮರದಲ್ಲಿ ಸಿಎಂ ತವರಿನ ಸೋಲು ಪರಿಷತ್ ಚುನಾವಣೆಯಲ್ಲಿ ಮಾಜಿ ಸಿಎಂ ತವರಿನಲ್ಲಿ ಅಗಬಾರದು ಎನ್ನುವ ಕಾರಣಕ್ಕೆ ಆದ್ಯತೆ ಮೇಲೆ ಬಿಎಸ್​ವೈ ಪ್ರಚಾರದ ಕಣಕ್ಕಿಳಿದಿದ್ದಾರೆ.

ಯಡಿಯೂರಪ್ಪ ಪರಿಷತ್​​ ಚುನಾವಣಾ ಪ್ರಚಾರ : ಇತ್ತೀಚಿನ ವರ್ಷಗಳಲ್ಲಿ ಯಾವುದೇ ಚುನಾವಣಾ ಪ್ರಚಾರಕ್ಕೂ ಕೊಡದಷ್ಟು ಸಮಯ ಮತ್ತು ಪ್ರಾಮುಖ್ಯತೆಯನ್ನು ಶಿವಮೊಗ್ಗದ ಪರಿಷತ್ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ.

ಸ್ವತಃ ತಮ್ಮದೇ ಪ್ರಚಾರಕ್ಕೂ ನಿರಂತರ 6 ದಿನಗಳ ಕಾಲ ಒಂದೇ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಉದಾಹರಣೆ ಇತ್ತೀಚಿನ ವರ್ಷಗಳಲ್ಲಿ ಕಾಣುವುದಿಲ್ಲ. ಆದರೆ ಶಿವಮೊಗ್ಗ ವಿಧಾನ ಪರಿಷತ್ ಸ್ಥಾನದ ಚುನಾವಣೆಗೆ ಸತತವಾಗಿ ಪ್ರಚಾರ ಕಾರ್ಯ ನಡೆಸಿ ಗಮನ ಸೆಳೆದಿದ್ದಾರೆ.

ದಿನಕ್ಕೆರಡು ಸಮಾವೇಶದಲ್ಲಿ ಭಾಗಿಯಾಗಿರುವ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಚನ್ನಗಿರಿ, ಸಂತೆಬೆನ್ನೂರು, ಶಿಕಾರಿಪುರ, ಶಿರಾಳಕೊಪ್ಪ, ಶಿವಮೊಗ್ಗ ಗ್ರಾಮಾಂತರ, ತೀರ್ಥಹಳ್ಳಿ, ಸಾಗರ, ಸೊರಬ, ಹೊನ್ನಾಳಿಯಲ್ಲಿ ನಡೆದ ಸಮಾವೇಶಗಳಲ್ಲಿ ಪಾಲ್ಗೊಂಡು ಅವಿರತವಾಗಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯ ನಡೆಸಿದ್ದಾರೆ.

Share News

About admin

Check Also

ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ ಸುಭಾಷ್ ಚಂದ್ರ ಬೋಸ್ ಅವರ ಪುತ್ರಿ

ನವದೆಹಲಿ :   ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನ ಹಿನ್ನಲೆ ಇಂದು ದೆಹಲಿಯ …

Leave a Reply

Your email address will not be published. Required fields are marked *

You cannot copy content of this page