Breaking News

ಅಹಿತಕರ ಘಟನೆಗಳನ್ನು ತಡೆಯುವ ದೃಷ್ಟಿಯಿಂದ ಹೊಸ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ-


ಹುಬ್ಬಳ್ಳಿ: ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಹಾಗೂ ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯಲು ಪೊಲೀಸ್ ಇಲಾಖೆಯಿಂದ ಖಾಸಗಿ ಸಹಭಾಗಿತ್ವದಲ್ಲಿ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ.

ಗೋಕುಲ ರಸ್ತೆ ಪೋಲೀಸ್ ಠಾಣೆ ಹಾಗೂ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಹಿರಿಯ ಅಧಿಕಾರಿಗಳು ನಿಲ್ದಾಣಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾಗಳ ಕಾರ್ಯವಿಧಾನ ಪರಿವೀಕ್ಷಿಸಿದರು. ಇನ್ನಿತರ ಸುರಕ್ಷತಾ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.

ನಂತರ ಗೋಕುಲ ರಸ್ತೆ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಜಾಕಿರ ಪಾಷಾ ಕಾಲಿಮಿರ್ಚಿ ಮಾತನಾಡಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇತ್ತೀಚೆಗೆ ಪ್ರಯಾಣಿಕರ ಲ್ಯಾಪ್ ಟಾಪ್ ಕಳ್ಳತನ, ಪಿಕ್ ಪಾಕೆಟ್ ಅಲ್ಲದೆ ಸಿಬ್ಬಂದಿಗಳ ಟಿಕೆಟ್ ಟ್ರೇ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು.ಇಂತಹ ಪ್ರಕರಣಗಳು ಸೇರಿದಂತೆ ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯುವ ದೃಷ್ಟಿಯಿಂದ ಖಾಸಗಿಯವರ ಪ್ರಾಯೋಜಕತ್ವದಲ್ಲಿ ನಿಲ್ದಾಣದಲ್ಲಿ ಒಟ್ಟು16 ಸಿಸಿ ಕ್ಯಾಮರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ 8 ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಶೀಘ್ರದಲ್ಲಿ ಇನ್ನುಳಿದ ಕ್ಯಾಮರಾಗಳನ್ನು ಅಳವಡಿಸಲಾಗುತ್ತದೆ ಎಂದು ಹೇಳಿದರು.

ಪ್ರೊಬೇಷನರಿ ಪಿ.ಎಸ್.ಐ ವಿಶ್ವನಾಥ ಸಿಸಿ ಕ್ಯಾಮರಾಗಳನ್ನು ಅಳವಡಿಸಿರುವ ಸ್ಥಳಗಳು,ಅವುಗಳ ಕಾರ್ಯ ವಿಧಾನ, ದಾಖಲಾಗುವ ದೃಷ್ಯಾವಳಿಗಳ ದತ್ತಾಂಶ ಸಂಗ್ರಹಣೆ ನಿರ್ವಹಣೆ ಮತ್ತು ಸಂರಕ್ಷಣೆ ಕುರಿತು ಮಾಹಿತಿ ನೀಡಿದರು.

ವಿಭಾಗೀಯ ಸಂಚಾರ ಅಧಿಕಾರಿ ಎಸ್.ಎಸ್.ಮುಜುಂದಾರ, ವಿಭಾಗೀಯ ತಾಂತ್ರಿಕ ಶಿಲ್ಪಿ ಪ್ರವೀಣ ಈಡೂರ,ಭದ್ರತಾ ಜಾಗೃತಾಧಿಕಾರಿ ಶ್ರೀಪತಿ ದೊಡ್ಡಲಿಂಗಣ್ಣವರ,ಘಟಕ ವ್ಯವಸ್ಥಾಪಕ ಬಸಪ್ಪ ಪೂಜಾರಿ ಮತ್ತಿತರರು ಇದ್ದರು.

Share News

About admin

Check Also

Featured Video Play Icon

ಸಂಸ್ಕೃತಿ ಇಲಾಖೆಯ ಸಚಿವರಿಗೆ ಸಂಸ್ಕೃತಿಯೇ ಇಲ್ಲ: ರಾಜ್ಯ ಸರ್ಕಾರದ ಭವಿಷ್ಯ ನುಡಿದ ಟೆಂಗಿನಕಾಯಿ..!

ಹುಬ್ಬಳ್ಳಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಆಕಾಶಕ್ಕೆ ಉಗುಳಿದರೇ …

Leave a Reply

Your email address will not be published. Required fields are marked *

You cannot copy content of this page