ಧಾರವಾಡ: ತಾಲೂಕಿನ ತೇಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಬಾಕಿ ಕೂಲಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ, ಧಾರವಾಡದಲ್ಲಿ ತೇಗೂರು ಹಾಗೂ ಗುಳೇದಕೊಪ್ಪದ ಗ್ರಾಮಸ್ಥರು ಬೀದಿಗೆ ಇಳಿದು ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪಂಚಾಯತ ಸಭಾಭನದ ಮುಂಭಾಗದಲ್ಲಿ ರೈತ ಕೃಷಿಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ, ಗ್ರಾಮಸ್ಥರು ತೇಗೂರು ಗ್ರಾಮ ಪಂಚಾಯತಿ ಅಧಿಕಾರಿ ಹಾಗೂ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.
ಸರ್ಕಾರ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲೆಂದು ಪಂಚಾಯತಿಯ ನೇತೃತ್ವದಲ್ಲಿ ಗ್ರಾಮಸ್ಥರಿಗೆ ನರೇಗಾ ಯೋಜನೆ ಮೂಲಕ ಕೆಲಸ ನೀಡಿ, ಕೂಲಿಯನ್ನು ನೀಡುತ್ತದೆ. ಆದರೆ ತೇಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಕೆಲಸ ಮಾತ್ರ ಮಾಡಿಸಿಕೊಳ್ಳಲಾಗುತ್ತಿದ್ದು, ಸಕಾಲಕ್ಕೆ ಕೂಲಿ ನೀಡುತ್ತಿಲ್ಲ. ಇದರಿಂದ ಗ್ರಾಮಸ್ಥರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಹಲವು ಬಾರಿ ಈ ಕುರಿತು ಮನವಿ ನೀಡಿದ್ದರು, ಯಾವುದೇ ಪ್ರಯೋಜನವಾಗುತ್ತಿಲ್ಲ. ಹಾಗಾಗಿ ಇಂದು ಅನಿವಾರ್ಯವಾಗಿ ಜಿಲ್ಲಾ ಪಂಚಾಯತಿಗೆ ಬಂದು ಪ್ರತಿಭಟನೆ ಮಾಡಬೇಕಾಗಿದೆ ಎಂದು ಅಳಲು ತೋಡಿಕೊಂಡರು.
ಕೂಡಲೇ ಜಿಲ್ಲಾ ಪಂಚಾಯತಿ ಅಧಿಕಾರಿಗಳು ತೇಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನರೇಗಾ ಯೋಜನೆಯ ಬಾಕಿ ಕೂಲಿ ಹಣವನ್ನು ಬೀಡುಗಡೆ ಮಾಡಬೇಕು, ಇಲ್ಲವಾದಲ್ಲಿ ಜಿಲ್ಲಾ ಪಂಚಾಯತಿ ಮುಂಭಾಗದಲ್ಲಿಯೇ ಧರಣಿ ಕೈಗೊಳ್ಳಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news

