Breaking News

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಕಾವ್ಯ ಗೌಡ

ಬೆಂಗಳೂರು: ಕಿರುತೆರೆ ನಟಿ ಕಾವ್ಯ ಗೌಡ, ಉದ್ಯಮಿ ಸೋಮಶೇಖರ್ ಜೊತೆ ಸಪ್ತಪದಿ ತುಳಿದ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಡಿಸೆಂಬರ್ 1ರಂದು ಸೋಮಶೇಖರ್, ಕಾವ್ಯ ಮದುವೆ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‍ನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಎರಡೂ ಕುಟುಂಬದವರು, ಆತ್ಮೀಯರು, ಸ್ನೇಹಿತರು, ರಾಜಕೀಯ ಗಣ್ಯರು, ಚಿತ್ರರಂಗದವರು ಪಾಲ್ಗೊಂಡಿದ್ದರು.

ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‍ನಲ್ಲಿ ಕಾವ್ಯ ಗೌಡ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು. ಸ್ಯಾಂಡಲ್‍ವುಡ್ ಮತ್ತು ಕಿರುತೆರೆ ಅನೇಕ ಕಲಾವಿದರು ಆಗಮಿಸಿನಿ ಕಾವ್ಯಾ, ಸೋಮಶೇಖರ್ ಜೋಡಿಗೆ ಶುಭ ಹಾರೈಸಿದ್ದಾರೆ. ಸಂಗೀತ್ ಮೆಹೆಂದಿ, ಅರಿಶಿಣ ಶಾಸ್ತ್ರ ಕೂಡ ಅದ್ದೂರಿಯಾಗಿ ನಡೆದಿದೆ. ಅವರ ಕನಸಿನಂತೆ ಕಾವ್ಯ ಗೌಡ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಗೆ ಸಂಬಂಧಪಟ್ಟ ಎಲ್ಲ ಶಾಸ್ತ್ರಗಳಿಗೂ ಕೂಡ ಕಾವ್ಯ ಗೌಡ ತುಂಬ ವಿಭಿನ್ನವಾಗಿ ವಸ್ತ್ರ ವಿನ್ಯಾಸ ಮಾಡಿದ್ದಾರೆ. ಮದುವೆ ಶಾಸ್ತ್ರದ ಪ್ರತಿಯೊಂದು ಫೋಟೋವನ್ನು ಕಾವ್ಯ ಅವರು ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಶುಭಹಾರೈಸಿ ಕಾಮೆಂಟ್ ಮಾಡಿದ್ದಾರೆ.

ಮಿಸ್ಟರ್ ಎಸ್ ನೀವು ನನ್ನ ಉತ್ತಮ ಸ್ನೇಹಿತ ಮತ್ತು ನನ್ನ ಪ್ರೇಮಿಯಾಗಿದ್ದೀರಿ. ನಾನು ನಿನ್ನನ್ನು ಪ್ರೀತಿಸುತ್ತೇನೆ ಮಾ… ಎಂದು ಬರೆದುಕೊಂಡು ಇನ್‍ಸ್ಟಾಗ್ರಾಮ್‍ನಲ್ಲಿ ಬ್ಯಾಚುಲರ್ ಪಾರ್ಟಿಯ ಕಲರ್ ಕಲರ್ ಫೋಟೋವನ್ನು ಶೇರ್ ಮಾಡಿಕೊಂಡಿದ್ದರು. ಇದೀಗ ಮದುವೆಯ ಸಂತೋಷದ ಕ್ಷಣಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *