Breaking News

ಹೆಗ್ಗೇರಿ ಆಯುರ್ವೇದ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಹುಬ್ಬಳ್ಳಿ: ಸತ್ತೂರಿನ ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡಿರುವ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯದ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಹೌದು ಹುಬ್ಬಳ್ಳಿಯ ಹೆಗ್ಗೇರಿಯಲ್ಲಿರುವ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಅಯೋಧ್ಯಯಲ್ಲಿ ನಡೆದ ಆಯುರ್ವೇದ ಸೆಮಿನಾರ್ ನಲ್ಲಿ ಭಾಗವಹಿಸಿದ್ದರು.ಕಳೆದ ನವಂಬರ್ 27-28 ರಂದು ನಡೆದಿದ್ದ ಸಮಾವೇಶದಲ್ಲಿ 2 ಸಾವಿರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಸಿದ್ದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗುತ್ತಿದೆ.

ಕಾಲೇಜ್ ನಿಂದ ಶಿಕ್ಷಕರೂ ಸೇರಿ 36 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಳೆದ ನವೆಂಬರ್ 30 ರಂದು ಹುಬ್ಬಳ್ಳಿಗೆ ಆಗಮಿಸಿದ್ದರು. ಹುಬ್ಬಳ್ಳಿಗೆ ಬಂದ ನಂತರ ಕ್ವಾರಂಟೈನ್ ಲ್ಲಿದ್ದ ವಿದ್ಯಾರ್ಥಿಗಳು. ಸಂಸ್ಥೆಯ ನಿರ್ದೇಶನದ ಮೇರೆಗೆ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಿಸಿದ್ದರು.

ಇಂದು ಮೂವರು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಬ್ಬರಿಗೆ ಯಾವುದೇ ರೋಗ ಲಕ್ಷಣಗಳಿಲ್ಲ
ಒಂದು ವಾರ ಕ್ವಾರಂಟೈನ್ ಇರಲು ಸೂಚನೆ ನೀಡಲಾಗಿದೆ.

Share News

About admin

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *