ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಇಂದು ಕಳಚಿದೆ. ಸ್ಯಾಂಡಲ್ವುಡ್ನಲ್ಲಿ ಶಿವರಾಮಣ್ಣ ಎಂದು ಗುರುತಿಸಿಕೊಂಡಿದ್ದ ನಟ ಶಿವರಾಮ್(83) ಇಂದು ಕೊನೆಯುಸಿರೆಳೆದಿದ್ದಾರೆ. ಇವರ ನಿದಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಪೂಜೆ ಮಾಡುತ್ತಿದ್ದ ವೇಳೆ ತಲೆ ತಿರುಗಿ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಆದರೆ ಇಂದು ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಇದರ ಬೆನ್ನಲ್ಲೇ ಇಹಲೋಕ ತ್ಯಜಿಸಿದ್ದಾರೆ
ಹಿರಿಯ ನಟನ ನಿಧನಕ್ಕೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದು, ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಮ್ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಮ್ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

