Breaking News

ಸಾಂಕ್ರಾಮಿಕ ರೋಗದ ಬಗ್ಗೆ ಪ್ರಬಂಧ ಸ್ಪರ್ಧೆ ವೈದ್ಯರಿಂದ ಜಾಗೃತಿ ಕಾರ್ಯಕ್ರಮ

ಕುಂದಗೋಳ : ನಿತ್ಯ ಜಾಗೃತವಾದ ಜೀವನ ಶೈಲಿ ಆರೋಗ್ಯದ ಪ್ರಯೋಜನ ಹಾಗೂ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಸೂಕ್ತ ಜ್ಞಾನ ಒದಗಿಸುವ ನಿಟ್ಟಿನಲ್ಲಿ ಕುಂದಗೋಳ ತಾಲೂಕ ಆಸ್ಪತ್ರೆ ವೈದ್ಯಾಧಿಕಾರಿಗಳು ಹೊಸ ಪ್ರಯೋಗ ಮಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ್ದಾರೆ.

ಹೌದು ! ತಾಲೂಕು ಆಸ್ಪತ್ರೆ ವೈದ್ಯರು ಶಿವಾನಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಮಾಣ ಪತ್ರ ನೀಡಿ ಬಳಿಕ ಸಾಂಕ್ರಾಮಿಕ ರೋಗ ಹಾಗೂ ರೋಗವಲ್ಲದ ಕಾಯಿಲೆಗಳ ಬಗ್ಗೆ ಆರೋಗ್ಯ ಶಿಕ್ಷಣಾಧಿಕಾರಿ ರೂಪಾ ತುರಮುರಿ ತಿಳಿಸಿದ್ದಾರೆ.

ಡಾ.ಅಮೀನುದ್ದಿನ್ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಕಾಲೇಜು ವಿದ್ಯಾರ್ಥಿಗಳಿಗೆ ನಗದು ಹಣ ಬಹುಮಾನ ನೀಡಿ ರೋಗಗಳ ಮುನ್ನೆಚ್ಚರಿಕೆ ಹಾಗೂ ರೋಗದಿಂದ ಗುಣಮುಖರಾಗಲು ಏನು ಮಾಡಬೇಕು ಎಂಬುದನ್ನು ತಿಳಿಸಿ ತಮ್ಮ ತಮ್ಮ ಪಾಲಕ ಪೋಷಕರಿಗೆ ಈ ಬಗ್ಗೆ ಸೂಕ್ತ ತಿಳುವಳಿಕೆ ನೀಡುವಂತೆ ಕೋರಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *