Breaking News

ವೈಯಕ್ತಿಕ ದ್ವೇಷದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ

ತುಮಕೂರು : ವೈಯಕ್ತಿಕ ದ್ವೇಷದ ಹಿನ್ನೆಲೆ ಬಿಜೆಪಿ ಕಾರ್ಯಕರ್ತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿ ಕೆ ಹಳ್ಳಿ ಕ್ರಾಸ್ ಬಳಿ ನಡೆದಿದೆ. ಪ್ರಸನ್ನ ಕುಮಾರ್(46) ಹತ್ಯೆಗೀಡಾದ ಕಾರ್ಯಕರ್ತ. ಇವರು ಪಾವಗಡ ತಾಲೂಕು ಬಿಜೆಪಿ ರೈತ ಮೋರ್ಚಾದ ಸದಸ್ಯರಾಗಿ ಕೆಲಸ ಮಾಡುತ್ತಿದ್ದರು. ಬೈಕ್​​ನಲ್ಲಿ ಪಾವಗಡದಿಂದ ತಮ್ಮ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿ ದಾಳಿ ನಡೆಸಿದ್ದಾರೆ.

ಈ ವೇಳೆ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *