Breaking News

ಸೇನಾ ಹೆಲಿಕಾಪ್ಟರ್​​ ಪತನ: ಘಟನಾ ಸ್ಥಳದಲ್ಲಿ 5 ಮೃತದೇಹ ಪತ್ತೆ: ರಾವತ್​​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಚೆನ್ನೈ(ತಮಿಳುನಾಡು): ಸೇನಾಪಡೆಗಳ ಮುಖ್ಯಸ್ಥ ಬಿಪಿನ್​​ ರಾವತ್​​ ಹಾಗೂ ಅವರ ಕುಟುಂಬದ ಸದಸ್ಯರು ಸೇರಿದಂತೆ ಅನೇಕರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ತಮಿಳುನಾಡಿನ ಕನೂರಿನಲ್ಲಿ ಪತನಗೊಂಡಿದೆ. ಇದರಲ್ಲಿ ಒಟ್ಟು 14 ಜನರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಈಗಾಗಲೇ ಲಭ್ಯವಾಗಿರುವ ಮಾಹಿತಿ ಪ್ರಕಾರ ಘಟನಾ ಸ್ಥಳದಲ್ಲಿ ಐವರ ಮೃತದೇಹ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಕೆಲವರನ್ನ ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್​ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ ಸೇನಾ ಮುಖ್ಯಸ್ಥ ಬಿಪಿನ್​ ರಾವತ್​​ ಸಹ ಸೇರಿಕೊಂಡಿದ್ದಾರೆ.ಸೇನಾ ಹೆಲಿಕಾಪ್ಟರ್​​​ ಕನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ತೆರಳುತ್ತಿತ್ತು. ಈ ವೇಳೆ ನೀಲಗಿರಿ ಅರಣ್ಯ ಪ್ರದೇಶದ ಕನೂರು ಬಳಿ ಅಪಘಾತಕ್ಕೀಡಾಗಿದೆ. ಘಟನಾ ಸ್ಥಳದಲ್ಲಿ ಈಗಾಗಲೇ ತೀವ್ರ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಬಿಪಿನ್​ ರಾವತ್​​ ಸೇರಿದಂತೆ ಕೆಲವರನ್ನ ಈಗಾಗಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *