Breaking News

ಹೆಲಿಕಾಪ್ಟರ್ ಪತನವಾದ ಸ್ಥಳದಲ್ಲಿ ಶಂಕಿತ ವ್ಯಕ್ತಿ ಅರೆಸ್ಟ್

ಚೆನ್ನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಪತನಗೊಂಡಿದ್ದು, ರಾವತ್ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬನ್ನು  CRPF ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಘಟನೆ ನಡೆದ ಸ್ಥಳ ವೆಲ್ಲಿಂಗ್‍ಟನ್‍ನಿಂದ ಏಳು ಕಿಮೀ ಪರ್ವತ ಪ್ರದೇಶದಲ್ಲಿದೆ ಎಂದು ತಿಳಿದು ಬಂದಿದೆ. ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು (ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು.

ವೆಲ್ಲಿಂಗ್ಟನ್‍ನ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿನಲ್ಲಿ ಇಂದು ಮಧ್ಯಾಹ್ನ ನಡೆಯಲಿದ್ದ ಕೆಡೆಟ್ ಸಂವಾದ ಕಾರ್ಯಕ್ರಮಕ್ಕೆ ಭಾಗವಹಿಸಲು ರಾವತ್ ಸೇರಿ 14 ಮಂದಿ ಹೆಲಿಕಾಪ್ಟರ್‌ನಲ್ಲಿ ಆಗಮಿಸುತ್ತಿದ್ದರು. ಇನ್ನೇನು 10 ಕೀ.ಮೀ. ಇರುವಂತೆ ಮಧ್ಯಾಹ್ನ 12:20ರ ಸುಮಾರಿಗೆ ಹೆಲಿಕಾಪ್ಟರ್ ಮರಕ್ಕೆ ಡಿಕ್ಕಿಯಾಗಿ ಪತನಗೊಂಡಿದೆ. ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದವರಲ್ಲಿ 11 ಮಂದಿ ಸಾವನ್ನಪ್ಪಿ, 3 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ತೆರಳಿದ್ದಾರೆ

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *